ಮಹಿಳೆಗೂ ರಾಷ್ಟ್ರಪತಿ ಸ್ಥಾನ ನೀಡಿ ಗೌರವ ನೀಡಿದ ಸರಕಾರ ಬಿಜೆಪಿ – ಡಾ.ಭಾರತಿ ಪ್ರವೀಣ್ ಪವಾರ್
ಪುತ್ತೂರು: ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಪ್ರಚಾರದ ಸಲುವಾಗಿ ಎ.26 ರಂದು ಬಿಜೆಪಿ ಮಹಿಳಾ ಸಮಾವೇಶ ಪುತ್ತೂರು ಜೈನ ಭವನದಲ್ಲಿ ನಡೆಯಿತು.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವೆ ಡಾ.ಭಾರತಿ ಪ್ರವೀಣ್ ಪವಾರ್ ಅವರು ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿ ದೇಶದಲ್ಲಿ ಬಿಜೆಪಿ ಸರಕಾರ ಮಹಿಳೆಯರಿಗೆ ನೀಡಿದಷ್ಟು ಸ್ಥಾನಮಾನ ಬೇರೆ ಯಾವ ಪಕ್ಷವೂ ನೀಡಿಲ್ಲ. ಬಿಜೆಪಿ ಸರಕಾರ ರಾಷ್ಟ್ರಪತಿ ಸ್ಥಾನವನ್ನು ಮಹಿಳೆಗೆ ನೀಡಿದಾಗ ಪ್ರತ್ಯೇಕ ಅಭ್ಯರ್ಥಿಯನ್ನು ನಿಲ್ಲಿಸುವ ಮೂಲಕ ಕಾಂಗ್ರೆಸ್ ವಿರೋಧಿಸಿತ್ತು. ಇದನ್ನು ಪ್ರತಿಯೊಬ್ಬ ಕಾರ್ಯಕರ್ತರು ಪ್ರಶ್ನಿಸಬೇಕೆಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ದಿಕ್ಸೂಚಿ ಭಾಷಣ ಮಾಡಿದರು. , ಶಾಸಕ ಸಂಜೀವ ಮಠಂದೂರು, ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಮಾತನಾಡಿದರು.ಮಾಜಿ ಶಾಸಕಿ ಮಲ್ಲಿಕಾಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಮಹಿಳಾ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಡಾ.ಮಂಜುಳಾ, ಚುನಾವಣಾ ಪ್ರಭಾರಿ ರಾಜೇಶ್ ಕಾವೇರಿ, ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ್, ಬಿಜೆಪಿ ರಾಷ್ಡ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯೆ ಬಿಂದು ಹರೀಶ್, ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾ ಅಧ್ಯಕ್ಷೆ ಧನಲಕ್ಷ್ಮೀ ಗಟ್ಟಿ, ಬಿಜೆಪಿ ಪುತ್ತೂರು ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಎಸ್ ಅಪ್ಪಯ್ಯ ಮಣಿಯಾಣಿ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಪಿ ಜಿ ಜಗನ್ನಿವಾಸ ರಾವ್, ತ್ರಿವೇಣಿ ಪೆರ್ವೋಡಿ, ಆರ್ ಸಿ ನಾರಾಯಣ ಸಹಿತ ಹಲವಾರು ಮಂದಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಶರವಾತಿ ರವಿ ನಾರಾಯಣ ಸ್ವಾಗತಿಸಿದರು. ಗೌರಿ ಬನ್ನೂರು ಕಾರ್ಯಕ್ರಮ ನಿರೂಪಿಸಿದರು.