ಎ.29: ಪುಣಚ ಮಹಿಷಮರ್ದಿನಿ ದೇವಿಗೆ ದೃಢಕಲಶಾಭಿಷೇಕ

0

ಪುಣಚ: ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಮಾ.8ರಿಂದ ಮಾ.13 ರವರೆಗೆ 6 ದಿನಗಳ ಕಾಲ ನಡೆದ ಬ್ರಹ್ಮಕಲಶೋತ್ಸವ ಅಂಗವಾಗಿ ದೃಢಕಲಶಾಭಿಷೇಕವು ಎ.29 ಕ್ಷೇತ್ರದಲ್ಲಿ ನಡೆಯಲಿದೆ.


ಎ. 28 ರಂದು ಬ್ರಹ್ಮಶ್ರೀ ವರ್ಕಾಡಿ ಗಣೇಶ ತಂತ್ರಿಗಳ ನೇತೃತ್ವದಲ್ಲಿ ಸಾಯಂಕಾಲ ಧಾರ್ಮಿಕ, ತಾಂತ್ರಿಕ ಕಾರ್ಯಕ್ರಮಗಳೊಂದಿಗೆ ವಾಸ್ತು ಹೋಮ, ರಾಕ್ಷೋಘ್ನ ಹೋಮ ನಡೆಯಲಿದೆ.

ಎ. 29 ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ದೃಢಕಲಶಾಭಿಷೇಕ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಬಳಿಕ ಬ್ರಹ್ಮಕಲಶೋತ್ಸವ ಸಮಿತಿಯ ಲೆಕ್ಕ ಪತ್ರ ಮಂಡನಾ ಸಭೆ ನಡೆಯಲಿದೆ ಎಂದು ಆಡಳಿತ ಸಮಿತಿ ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here