ಪುತ್ತೂರು: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನ ಸಭಾ ಚುನಾವಣೆಗೆ ನ್ಯಾಯಾಂಗ ಬಂಧನದಲ್ಲಿರುವ ಶಾಪಿ ಬೆಳ್ಳಾರೆ ಎಸ್ಡಿಪಿಐ ಅಭ್ಯರ್ಥಿಯಾಗಿ ಸ್ಪರ್ದಿಸುತ್ತಿದ್ದು, ಪಕ್ಷದ ಕಾರ್ಯಕರ್ತರು ಕ್ಷೇತ್ರದಾದ್ಯಂತ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಇಂದು ಸಾಲ್ಮರ, ಬನ್ನೂರು, ತಿಂಗಳಾಡಿ, ಕುಂಬ್ರ, ಕೂರ್ನಡ್ಕದಲ್ಲಿ ಪಕ್ಷದ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು.