ಪುತ್ತೂರು: ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನಕ್ಕೆ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಬಸವನ ಸಮರ್ಪಣೆ ಕಾರ್ಯಕ್ರಮ ಎ.27ರಂದು ನಡೆಯಿತು.

ಇತ್ತೀಚೆಗೆ ದೈವಸ್ಥಾನದ ಅಡಳಿತ ಮಂಡಳಿ ಮನವಿ ಮಾಡಿದಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಮಧೇನು ಗೋ ಶಾಲೆಯಿಂದ ಬಲ್ನಾಡು ದೈವಸ್ಥಾನಕ್ಕೆ ಸೂಕ್ತವಾಗಿರುವ ಬಸವನನ್ನು ನೀಡುವ ನಿರ್ಣಯ ಕೈಗೊಳ್ಳಲಾಯಿತು. ಅದಕ್ಕೆ ಪೂರಕವಾಗಿ ಬಸವನನ್ನು ಸಮರ್ಪಣೆ ಮಾಡುವ ಕಾರ್ಯಕ್ರಮ ದೇವಸ್ಥಾನದ ಸತ್ಯಧರ್ಮ ನಡೆಯಲ್ಲಿ ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರ ನೇತೃತ್ವದಲ್ಲಿ ನಡೆಯಿತು.

ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಅವರು ಬಸವನನ್ನು ಬಲ್ನಾಡು ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಾಧವ ಗೌಡ ಕಾಂತಿಲ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸದಸ್ಯರಾದ ಶೇಖರ್ ನಾರಾವಿ, ರವೀಂದ್ರನಾಥ ರೈ ಬಳ್ಳಮಜಲು, ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ವ್ಯವಸ್ಥಪನಾ ಸಮಿತಿ ಸದಸ್ಯರಾದ ಕಿರಣ್, ಅಶೋಕ್, ನಾರಾಯಣ ಪೂಜಾರಿ, ಬೋಜರಾಜ ಗೌಡ, ಕಚೇರಿ ವ್ಯವಸ್ಥಾಪಕ ಚಂದ್ರಶೇಖರ್ ಭಟ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here