ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯ: ಫ್ರೆಶರ್ಸ್ ಡೇ ಆಚರಣೆ

0

ಕುಂತೂರು: ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ 2022-23ನೇ ಸಾಲಿನ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿ ಶಿಕ್ಷಕರನ್ನು ಸ್ವಾಗತಿಸುವ ಫ್ರೆಶರ್ಸ್ ಡೇ ಕಾರ್ಯಕ್ರಮ ಏರ್ಪಡಿಸಲಾಯಿತು.


ಹಿರಿಯ ವಿದ್ಯಾರ್ಥಿ ಶಿಕ್ಷಕರು ಬಹಳ ವೈಶಿಷ್ಠ್ಯಪೂರ್ಣವಾಗಿ ನೂತನ ವಿದ್ಯಾರ್ಥಿ ಶಿಕ್ಷಕರನ್ನು ಸ್ವಾಗತಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಸಂಚಾಲಕ ವಂ|ಫಾ|ಡಾ| ಎಲ್ದೋ ಪುತ್ತೆನ್‌ಕಂಡತ್ತಿಲ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಹಿತನುಡಿಗಳನ್ನು ಹೇಳಿದರು.

ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಉಷಾ ಎಂ ಎಲ್, ಶಿಕ್ಷಕ ಸಂಘದ ಕಾರ್ಯದರ್ಶಿ ಉಪನ್ಯಾಸಕಿ ವಿನ್ಸಿ ಅಬ್ರಹಾಂ, ವಿದ್ಯಾರ್ಥಿ ಪ್ರತಿನಿಧಿ ಪ್ರಿನ್ಸಿ ಪಿ ಎಸ್ ಹಾಗೂ ಕಾಲೇಜಿನ ಎಲ್ಲಾ ಉಪನ್ಯಾಸಕ ವೃಂದವರು ಉಪಸ್ಥಿತರಿದರು. ವಿದ್ಯಾರ್ಥಿ ಶಿಕ್ಷಕರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here