ಉಪ್ಪಿನಂಗಡಿ: ಕಾಂಗ್ರೆಸ್‌ನ ಚುನಾವಣಾ ಪ್ರಚಾರ ಸಭೆ ಎ.30ರಂದು ಸಂಜೆ 5.30ಕ್ಕೆ 34 ನೆಕ್ಕಿಲಾಡಿಯ ಸಂತೆಕಟ್ಟೆ ವಠಾರದಲ್ಲಿ ನಡೆಯಲಿದೆ.
ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್ ಕೆ.ಬಿ. ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಸೇರಿದಂತೆ ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.