ಪುತ್ತೂರು: ಕಲಿಯುಗ ಕಲೆ,ಕಾರಣಿಕ ಇತಿಹಾಸ ಪ್ರಸಿದ್ಧ ಕ್ಷೇತ್ರವಾಗಿರುವ ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಮಜಲು ಸ್ವಾಮಿ ಕೊರಗಜ್ಜ, ಅಗ್ನಿ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.30ರಂದು ಮಧ್ಯಾಹ್ನ 12 ಗಂಟೆಗೆ ಸ್ವಾಮಿ ಕೊರಗಜ್ಜ ದೈವದ ಹಗಲು ಕೋಲ, ಅಗೇಲು ಸೇವೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.
ಕ್ಷೇತ್ರದಲ್ಲಿ ಪ್ರತಿ ತಿಂಗಳ ಸಂಕ್ರಮಣದಂದು ರಾತ್ರಿ ಕೆಂಡದರ್ಶನ ಸೇವೆ, ಅಗ್ನಿ ಕಲ್ಲುರ್ಟಿ ಮತ್ತು ಸ್ವಾಮಿ ಕೊರಗಜ್ಜ ದೈವಕ್ಕೆ ಕೋಲ,ಅಗೇಲು ಸೇವೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯುತ್ತದೆ. ಸಂಕ್ರಮಣದ ಹೊರತು ಪ್ರತಿ ಆದಿತ್ಯವಾರ ಮಧ್ಯಾಹ್ನ ಸ್ವಾಮಿ ಕೊರಗಜ್ಜ ದೈವದ ಹಗಲು ಕೋಲ, ಅಗೇಲು ಸೇವೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯುತ್ತದೆ ಎಂದು ಕ್ಷೇತ್ರದ ಧರ್ಮದರ್ಶಿ ಮಣಿಸ್ವಾಮಿ ತಿಳಿಸಿದ್ದಾರೆ.