ಪುಣಚ ದೇವಸ್ಥಾನ, ದೈವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ರೈ

0

ಪುಣಚ: ಪುಣಚದ ಮಹಿಷ ಮರ್ದಿನಿ ದೇವಸ್ಥಾನದ ದೃಢಕಲಶ ದಿನವಾದ ಇಂದು ಕಾಂಗ್ರೆಸ್‌ ನ ಅಶೋಕ್‌ ಕುಮಾರ್‌ ರೈ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಎಸ್‌ ಆರ್‌ ರಂಗಮೂರ್ತಿ ಮತ್ತು ಪದಾಧಿಕಾರಿಗಳು ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ ವರನ್ನು ಆತ್ಮೀಯವಾಗಿ ಸ್ವಾಗತಿಸಿದರು.

ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಆಶಾ ತಿಮ್ಮಪ್ಪ ಗೌಡ ಅವರಿಗೆ ದೇವಸ್ಥಾನದ ಪ್ರಧಾನ ಅರ್ಚಕ ಕೃಷ್ಣ ಬನ್ನಿಂತಾಯ ಪ್ರಸಾದ ವಿತರಿಸಿ ಹರಸಿದರು.ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಅಭಿಮಾನಿಗಳು ಉಪಸ್ಥಿತರಿದ್ದರು.

ಬಳಿಕ ಅಜ್ಜಿನಡ್ಕ ಸಂಕೇಶ ಧೂಮಾವತಿ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಮತಯಾಚನೆ ನಡೆಸಿದರು.

ಇದೇ ವೇಳೆ ಪುಣಚದ ಶ್ರೀ ಮಹಿಷಮರ್ಧಿನಿ ದೇವಸ್ಥಾನಕ್ಕೂ ಭೇಟಿ ನೀಡಿದ ಅಶೋಕ್‌ ರೈ ಶ್ರೀ ದೇವಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

LEAVE A REPLY

Please enter your comment!
Please enter your name here