ಜೆಇಇ ಮೈನ್ಸ್ ಫಲಿತಾಂಶ: ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಶಿಕಾ ಎಂ ಉತ್ತಮ ಸಾಧನೆ

0

ಉಪ್ಪಿನಂಗಡಿ: ಪ್ರಸಕ್ತ ಶೈಕ್ಷಣ ಕ ಸಾಲಿನ ಜೆಇಇ ಮೈನ್ಸ್ 2023 ಫಲಿತಾಂಶ ಪ್ರಕಟವಾಗಿದ್ದು ಇಲ್ಲಿನ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಶಿಕಾ ಎಂ 64907ನೇ ರ್‍ಯಾಂಕ್ ಗಳಿಸುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಈಕೆ ಮನೋಹರ್ ಮತ್ತು ಸವಿತಾ ಎಂ ದಂಪತಿಯ ಪುತ್ರಿಯಾಗಿದ್ದಾರೆ.

ರಾಷ್ಟ್ರಮಟ್ಟದ ಈ ಪ್ರವೇಶ ಪರೀಕ್ಷೆಯಲ್ಲಿ ಸುಮಾರು 9.5 ಲಕ್ಷದಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದು ಸಂಸ್ಥೆಯ ವಿದ್ಯಾರ್ಥಿನಿಯ ಫಲಿತಾಂಶವು ಅತ್ಯಂತ ಆಶಾದಾಯಕವಾಗಿದೆ ಮತ್ತು ನಿರಂತರ ವರ್ಷಗಳಲ್ಲಿ ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜು ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರವೇಶ ಪರೀಕ್ಷೆಯಲ್ಲಿ ಉತ್ತಮ ಸಾಧನೆಯನ್ನು ಮಾಡುತ್ತಾ ಬಂದಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಎಚ್ ಕೆ ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here