ಪತ್ತೂರು: ಪುತ್ತೂರಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ಬೆಂಗಳೂರಿನ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿನಿರ್ದೇಶಕ ಪುತ್ತೂರು ತೆಂಕಿಲ ನಿವಾಸಿ ವೈ ಶಿವರಾಮಯ್ಯ ಅವರು ಎ.30ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ.
ಪುತ್ತೂರಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ, ತಾ.ಪಂ ಕಾರ್ಯನಿರ್ವಹಣಾಧಿಕಾರಿಯಾಗಿ, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ, ದ.ಕ.ಜಿ.ಪಂ ಸಹಾಯಕ ಕಾರ್ಯದರ್ಶಿಯಾಗಿ, ಮಂಗಳೂರು ಉತ್ತರದ ಶಿಕ್ಷಣಾಧಿಕಾರಿಯಾಗಿ, ಸರಕಾರಿ ಶಿಕ್ಷಕ ಶಿಕ್ಷಣ ಮಹಾ ವಿದ್ಯಾಲಯದ ಪ್ರವಚನಕಾರರಾಗಿ, ಪ್ರಸ್ತುತ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಲ್ಲಿ ಸರ್ವ ಶಿಕ್ಷಣ ಅಭಿಯಾಣದ ಸಹ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅವರು ಎ.30ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ.