NMMSಪರೀಕ್ಷೆ : ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಗೆ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ 29 ವಿದ್ಯಾರ್ಥಿಗಳು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ನಡೆಸಿಕೊಡುವ ನ್ಯಾಶನಲ್ ಮೀನ್ಸ್-ಕಮ್-ಮೆರಿಟ್ ವಿದ್ಯಾರ್ಥಿವೇತನ (NMMS) ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.


ಶಾಲೆಯ 8ನೇ ತರಗತಿಯ 29 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿ, ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿರುತ್ತಾರೆ. ಶಾಲೆಯು ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಹಾಗೂ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತದೆ. ಶಾಲೆಯ 8ನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿನಿ ಜ್ಯೋತಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದಿರುತ್ತಾರೆ.


ಈ ಪರೀಕ್ಷೆಗೆ ವಿದ್ಯಾರ್ಥಿಗಳಿಗೆ ಶಾಲೆಯ ಮುಖ್ಯಗುರು ಸತೀಶ್ ಭಟ್ ಹಾಗೂ ಅಧ್ಯಾಪಕ ವೃಂದದವರು ತರಬೇತಿ ನೀಡಿದ್ದರು. ಈಗಾಗಲೇ ಮುಂದಿನ ವರ್ಷದ NMMS ಪರೀಕ್ಷೆಗೆ ವಿದ್ಯಾರ್ಥಿಗಳ ದಾಖಲಾತಿ ಪ್ರಾರಂಭವಾಗಿದೆ.

LEAVE A REPLY

Please enter your comment!
Please enter your name here