ಪುಣಚ: ಪುಣಚದ ಮಹಿಷ ಮರ್ದಿನಿ ದೇವಸ್ಥಾನದ ದೃಢಕಲಶ ದಿನವಾದ ಇಂದು ಭಾರತೀಯ ಜನತಾ ಪಕ್ಷದ ಪುತ್ತೂರು ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಎಸ್ ಆರ್ ರಂಗಮೂರ್ತಿ ಮತ್ತು ಪದಾಧಿಕಾರಿಗಳು ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ವರನ್ನು ಆತ್ಮೀಯವಾಗಿ ಸ್ವಾಗತಿಸಿದರು.
ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಆಶಾ ತಿಮ್ಮಪ್ಪ ಗೌಡ ಅವರಿಗೆ ದೇವಸ್ಥಾನದ ಪ್ರಧಾನ ಅರ್ಚಕ ಕೃಷ್ಣ ಬನ್ನಿಂತಾಯ ಪ್ರಸಾದ ವಿತರಿಸಿ ಹರಸಿದರು.ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಅಭಿಮಾನಿಗಳು ಉಪಸ್ಥಿತರಿದ್ದರು.