ಉಪ್ಪಿನಂಗಡಿಯಲ್ಲಿ ಸರಣಿ ಕಳ್ಳತನ

0

ಉಪ್ಪಿನಂಗಡಿ: ಇಲ್ಲಿನ ಬ್ಯಾಂಕ್ ರಸ್ತೆಯಲ್ಲಿನ 7 ಅಂಗಡಿಗಳಿಗೆ ಶನಿವಾರ ರಾತ್ರಿ ವೇಳೆ ಕಳ್ಳ ನುಗ್ಗಿ ಕಳ್ಳತನ ನಡೆಸಿದ ಘಟನೆ ನಡೆದಿದೆ.


ಉಪ್ಪಿನಂಗಡಿ ಹಳೇ ಬಸ್ ನಿಲ್ದಾಣದ ಬಳಿಯ ಚಿನ್ನ ಬೆಳ್ಳಿ ಆಭರಣದ ಅಂಗಡಿಗೆ ಮಾಡಿನ ಹಂಚು ತೆಗೆದು ಒಳ ನುಗ್ಗಿದ ಕಳ್ಳ ಚಿನ್ನಾಭರಣದ ತಿಜೋರಿಯ ಬಾಗಿಲು ತೆರೆಯಲು ವಿಫಲನಾಗಿ, ಚಿಲ್ಲರೆ ಮೊತ್ತವನ್ನು ಎಗರಿಸಿದ್ದಾನೆ. ಸನಿಹದ ಮೆಡಿಕಲ್ ಶಾಪ್ ಗೂ ಹಂಚು ತೆಗೆದು ಒಳ ನುಗ್ಗಿದ ಕಳ್ಳ , ಅಂಗಡಿಯೊಳಗಿದ್ದ ಮೊಬೈಲ್ ವೊಂದನ್ನು ಕದ್ದೊಯ್ದಿದ್ದು, ಹಣಕ್ಕಾಗಿ ಹುಡುಕಾಟ ನಡೆಸಿದ್ದಾನೆ. ಅದೇ ಕಟ್ಟಡದ ಜವುಳಿ ಅಂಗಡಿಗೂ ಮಾಡಿನ ಹಂಚು ತೆಗೆದು ಒಳ ನುಗ್ಗಿದ ಕಳ್ಳ ಅಂಗಡಿಯೊಳಗಿಂದ 2 ಸ್ನಾನಕ್ಕೆ ಬಳಸುವ ಟೆವೆಲ್ ಕದ್ದೊಯ್ದಿದ್ದಾನೆ.


ಇದೇ ರಸ್ತೆಯ ಕೆನರಾ ಬ್ಯಾಂಕ್ ಸನಿಹದ ಹೋಟೇಲ್, ಫರ್ನೀಚರ್ ಅಂಗಡಿ, ಜನರಲ್ ಸ್ಟೋರ್ಸ್, ದಿನಸಿ ಅಂಗಡಿ ಕಟ್ಟಡಕ್ಕೂ ಒಳ ನುಗ್ಗಿದ ಕಳ್ಳ ಅಲ್ಲಿಂದಲೂ ಕೈಗೆ ದೊರೆತ ವಸ್ತುಗಳನ್ನೆಲ್ಲಾ ಎಗರಿಸಿದ್ದಾರೆ. ಫನಿರ್ಚರ್ ಅಂಗಡಿಯೊಳಗಿದ್ದ ಬೆಲೆ ಬಾಳುವ ವಾಚೊಂದನ್ನು ಕದ್ದೊಯ್ದಿದ್ದು, ಎಲ್ಲೆಡೆ ಅಂಗಡಿಯ ಮಾಡಿನಿಂದಲೇ ಒಳಪ್ರವೆಶಿಸಿದ ನಡೆ ಕಳ್ಳನಿಂದ ವ್ಯಕ್ತವಾಗಿದೆ.


ಸಿಸಿ ಟಿವಿ ಕ್ಯಾಮಾರದಲ್ಲಿ ಕಳ್ಳನ ಭಾವಚಿತ್ರ ಸ್ಪಷ್ಟವಾಗಿ ಸೆರೆಯಾಗಿದ್ದು, ಕಳ್ಳ ಪ್ರತಿಯೊಂದು ಅಂಗಡಿಯೊಳಕ್ಕೆ ನುಗ್ಗಿದಾಕ್ಷಣದಲ್ಲೇ ಸಿಸಿ ಟಿವಿ ಕ್ಯಾಮಾರಾದ ದಿಕ್ಕು ಬದಲಾಯಿಸುವ ಪ್ರಯತ್ನ ಮಾಡಿದ್ದಾನೆ. ಆ ವೇಳೆ ನಡೆಸುವ ಪ್ರಯತ್ನದ ಸಮಯದಲ್ಲಿ ಆತನ ಮುಖ ಕ್ಯಾಮರಾ ದಾಖಲೆಯಲ್ಲಿ ಸೆರೆಯಾಗಿದೆ.
ಉಪ್ಪಿನಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here