ಪುತ್ತೂರು: ಮೇ 10ರಂದು ನಡೆಯಲಿರುವ ರಾಜ್ಯ ವಿಧಾನ ಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಅಳಿಕೆ ಗ್ರಾಮದ ಮುಳಿಯದಲ್ಲಿ ನಡೆದ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿದ ಅಶೋಕ್ ಕುಮಾರ್ ರೈ ಕಾಂಗ್ರೆಸ್ ಬೆಂಬಲಿಸುವಂತೆ ಕೋರಿದರು.
ಸಭೆಯಲ್ಲಿ ಕೆಪಿಸಿಸಿ ಸದಸ್ಯ ಎಂ ಎಸ್ ಮಹಮ್ಮದ್, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಪ್ರವೀಣ್ ಚಂದ್ರ ಆಳ್ವ, ಪೆರುವಾಯಿ ಗ್ರಾ.ಪಂ ಮಾಜಿ ಅಧ್ಯಕ್ಷೆ ಪುಷ್ಪಾ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಂ ಕೆ ಬಿ, ವೇದನಾಥ್ ಸುವರ್ಣ, ಅಳಿಕೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಗದೀಶ್ ಶೆಟ್ಟಿ, ಅಳಿಕೆ ಗ್ರಾ ಪಂ ಮಾಜಿ ಅಧ್ಯಕ್ಷ ಪದ್ಮನಾಭ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.