ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಜಂಟಿ ಸಂಚಾಲಕರಾಗಿ ಅಮರನಾಥ್ ಗೌಡ

0

ಪುತ್ತೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಜಂಟಿ ಸಂಚಾಲಕರಾಗಿ ಪುತ್ತೂರಿನ ಅಮರ್‌ನಾಥ್ ಗೌಡ ಅವರನ್ನು ನೇಮಕಗೊಳಿಸಲಾಗಿದೆ. ಜಿಲ್ಲಾ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಅವರು ನೇಮಕ ಮಾಡಿದ್ದು, ತಕ್ಷಣದಿಂದಲೇ ಸ್ಥಳೀಯ ಬ್ಲಾಕ್ ಅಧ್ಯಕ್ಷರ ಹಾಗೂ ಅಭ್ಯರ್ಥಿಗಳ ನಿರ್ದೇಶನದಂತೆ ಪಕ್ಷದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ಅಮರನಾಥ ಗೌಡ ಅವರು ಈ ಬಾರಿ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ನ ಪ್ರಬಲ ಟಿಕೆಟ್ ಆಕಾಂಕ್ಷಿ ಎಂದು ಹಲವೆಡೆ ಬ್ಯಾನರ್ ಹಾಕಿಸಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಇವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು. ಇವರ ಪತ್ನಿ ಶೈಲಜಾಅಮರನಾಥ ಅವರು ಕೆಪಿಸಿಸಿ ಕಾನೂನು ಘಟಕದಲ್ಲಿ ಸಕ್ರಿಯರಾಗಿದ್ದು ಪ್ರಸ್ತುತ ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈಯವರೊಂದಿಗೆ ಚುನಾವಣಾ ಪ್ರಚಾರದಲ್ಲಿ ಸಕ್ರಿಯರಾಗಿದ್ದಾರೆ.

LEAVE A REPLY

Please enter your comment!
Please enter your name here