ಸಂವಿಧಾನ ಕೊಟ್ಟ ಅವಕಾಶವನ್ನು ಉಪಯೋಗಿಸಿ – ನವೀನ್ ಕುಮಾರ್ ಭಂಡಾರಿ ಎಚ್
ಪುತ್ತೂರು: ಮತದಾರರನ್ನು ಜಾಗೃತಿಗೊಳಿಸುವ ನಿಟ್ಟಿನಲ್ಲಿ ಪುತ್ತೂರು ತಾಲೂಕು ಸ್ವೀಪ್ ಸಮಿತಿಯಿಂದ ಸಂಸಾರ ಜೋಡುಮಾರ್ಗ, ರೋಟರಿ ಪುತ್ತೂರು ಎಲೈಟ್, ರೋಟರಿ ಪುತ್ತೂರು ಯುವ ಮತ್ತು ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ಸಹಯೋಗದೊಂದಿಗೆ ಮೇ 2ರಂದು ಮತದಾರರ ಜಾಗೃತಿಗೊಂಡು ಕವಿಗೋಷ್ಠಿ ಕಾರ್ಯಕ್ರಮ ಬೆಳಿಗ್ಗೆ ತಾ.ಪಂ ಮಿನಿ ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು.
ತಾಲೂಕು ಸ್ವೀಪ್ ಸಮಿತಿ ಮತ್ತು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮರ್ ಭಂಡಾರಿ ಎಚ್ ಅವರು ಕವಿಗೋಷ್ಠಿ ಉದ್ಘಾಟಿಸಿ ಮಾತನಾಡಿ ಮಾದ್ಯಮ, ಕವನದಿಂದ ವ್ಯಕ್ತಿ ಬದಲಾಗಲು ಸಾಧ್ಯ, ದಾರ್ಶನಿಕರ ಕವನದಿಂದ ಸಮಾಜವೇ ಬದಲಾಗಿದೆ. ಈ ನಿಟ್ಟಿನಲ್ಲಿ ಮತದಾರರು ಸಂವಿಧಾನ ಕೊಟ್ಟ ಅವಕಾಶವನ್ನು ಉಪಯೋಗಿಸಿ ಎಂದು ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್ ಪುತ್ತೂರು ಎಲೈಟ್ ಅಧ್ಯಕ್ಷ ಡಾ| ಪೀಟರ್ ವಿಲ್ಸನ್ ಪ್ರಭಾಕರ್, ರೋಟರಿ ಪುತ್ತೂರು ಯುವ ಅಧ್ಯಕ್ಷೆ ರಾಜೇಶ್ವರಿ ಕೆ ಆಚಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಾರಾಯಣ ರೈ ಕುಕ್ಕುವಳ್ಖಿ ಸಹಿತ ಅನೇಕ ಮಂದಿ ಉಪಸ್ಥಿತರಿದ್ದರು. ಭರತರಾಜ್ ಸ್ವಾಗತಿಸಿದರು. ಸಂಸಾರ ಜೋಡುಮಾರ್ಗದ ನಿರ್ದೇಶಕ ಮೌನೇಶ್ ವಿಶ್ವಕರ್ಮ ಕಾರ್ಯಕ್ರಮ ನಿರೂಪಿಸಿದರು.