ಕೋಡಿಂಬಾಡಿ ಪರನೀರು ನಿವಾಸಿಗಳಿಂದ ಚುನಾವಣೆ ಬಹಿಷ್ಕರಿಸಿ ಬ್ಯಾನರ್ ಅಳವಡಿಕೆ

0

ಪುತ್ತೂರು: ಕೋಡಿಂಬಾಡಿ ಗ್ರಾಮದ ಪರನೀರು ನಿವಾಸಿಗಳು 2023ರ ವಿಧಾನಸಭಾ ಚುನಾವಣೆ ಬಹಿಷ್ಕರಿಸಿ ಬ್ಯಾನರ್ ಅಳವಡಿಸಿದ್ದಾರೆ.

ಮೇ 1ರಂದು ಬ್ಯಾನರ್ ಅಳವಡಿಸಲಾಗಿದ್ದು, ನಾವು 2023ರ ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದೇವೆ. ಹಲವು ವರ್ಷಗಳಿಂದ ನಮಗೆ ರಸ್ತೆಯ ವ್ಯವಸ್ಥೆಯನ್ನು ಮಾಡಿಕೊಡಲು ಜನಪ್ರತಿನಿಧಿಗಳಿಂದಾಗಲಿ ಅಧಿಕಾರಿಗಳಾಗಲಿ ಗ್ರಾಮ ಪಂಚಾಯತ್‌ನಿಂದಾಗಲಿ ಸಾದ್ಯವಾಗಲಿಲ್ಲ. ಸಹಾಯಕ ಆಯುಕ್ತರು, ತಹಶೀಲ್ದಾರರು, ಗ್ರಾಮ ಪಂಚಾಯತಿನವರು ಸರಕಾರಿ ಸ್ಥಳವನ್ನು ಪರಿಶೀಲನೆ ಮಾಡಿದರೂ ರಾಜಕೀಯ ವ್ಯಕ್ತಿಗಳಿಂದ ಆಗುತ್ತಿರುವ ಅನ್ಯಾಯವನ್ನು ವಿರೋಧಿಸಿ ನಾವು ಚುನಾವಣೆಯನ್ನು ಬಹಿಷ್ಕರಿಸಿದ್ದೇವೆ ಎಂದು ಬ್ಯಾನರ್ ಅಳವಡಿಕೆ ಮಾಡಲಾಗಿದೆ.

LEAVE A REPLY

Please enter your comment!
Please enter your name here