ವಿಠ್ಠಲ್ ಜೇಸಿ ಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

0

ವಿಟ್ಲ: ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 2022-23ನೇ ಸಾಲಿನ ಹತ್ತನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ನಡೆಯಿತು.

ವಿದ್ಯಾರ್ಥಿಗಳು ತಮ್ಮ ತಮ್ಮ ಶಾಲಾ ದಿನಗಳ ಅನುಭವವನ್ನು ಹಂಚಿಕೊಂಡರು. ಪೋಷಕ, ನಿವೃತ ಯೋಧ ಕರುಣಾಕರ ರವರು ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಶುಭ ಹಾರೈಕೆಯ ಮಾತುಗಳನ್ನಾಡಿದರು.

ವಿದ್ಯಾರ್ಥಿಗಳ ಅನಿಸಿಕೆಗಳನ್ನಾಲಿಸಿದ ಆಡಳಿತ ಮಂಡಳಿ ಅಧ್ಯಕ್ಷರಾದ ಯಲ್.ಯನ್ ಕೂಡೂರು ರವರು ಸಂತಸ ವ್ಯಕ್ತಪಡಿಸಿದರಲ್ಲದೆ ಇದಕ್ಕೆ ಕಾರಣಕರ್ತರಾದ ಶಿಕ್ಷಕರನ್ನು ಶ್ಲಾಘಿಸಿದರು. ಸಂಸ್ಥೆಯ ಜೊತೆ ಕಾಯದರ್ಶಿಗಳಾದ ಶ್ರೀಪ್ರಕಾಶ್ ಕುಕ್ಕಿಲ ರವರು ಹತ್ತನೇ ತರಗತಿಯ ನಂತರದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹಾಗೂ ಉದ್ಯೋಗಕ್ಕೆ ಪೂರಕವಾದ ವಿಚಾರಗಳನ್ನು ಹಂಚಿಕೊಂಡರು.

ನಿರ್ದೇಶಕರಾದ ಗೋಕುಲ್ ಶೇಟ್ ರವರು ಹತ್ತನೇ ತರಗತಿಯಲ್ಲಿ ಅತ್ಯಧಿಕ ಅಂಕ ಪಡೆಯುವ ಓರ್ವ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಗೆ ನಗದು ಬಹುಮಾನ ವಿತರಿಸುವುದಾಗಿ ನುಡಿದರು.

ಸಂಸ್ಥೆಯ ಆಡಳಿತಧಿಕಾರಿ ರಾಧಾಕೃಷ್ಣರವರು ಮಾತನಾಡಿ ವಿದ್ಯಾರ್ಥಿಗಳಿಗೆ ಶಾಲೆಯ ಬಗ್ಗೆ ಪ್ರೀತಿ, ಗೌರವ ಬೇಕೆಂದು ಹೇಳಿದರು.
ಸಂಸ್ಥೆಯ ಪ್ರಾಂಶುಪಾಲರಾದ ಜಯರಾಮ ರೈರವರು ಮಾತನಾಡಿ ವಿದ್ಯಾವಂತರಾದರೆ ಸಾಲದು ಜೀವನ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು. ಹತ್ತನೇ ತರಗತಿಯ ವಿಷಯವಾರು ಶಿಕ್ಷಕರು ವಿದ್ಯಾರ್ಥಿಗಳಿಗೆ ಹಿತನುಡಿಗಳನ್ನಾಡಿದರು.


ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀಧರ್ ಶೆಟ್ಟಿ, ಕೋಶಾಧಿಕಾರಿ ಪ್ರಭಾಕರ ಶೆಟ್ಟಿ, ನಿರ್ದೇಶಕರಾದ ಮೋನಪ್ಪ ಶೆಟ್ಟಿ, ವಿಜಯ ಪಾಯಸ್, ಉಪಪ್ರಾಂಶುಪಾಲೆಯರಾದ ಜ್ಯೋತಿ ಶೆಣೈ ಹಾಗೂ ಹೇಮಲತಾ, ಶಿಕ್ಷಕ, ಶಿಕ್ಷಕೇತರ ವೃಂದ, ಪೋಷಕರು ಹಾಗೂ ಒಂಭನೇ ತರಗತಿ ತೇರ್ಗಡೆಗೊಂಡ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಮನೋನ್ಮಯಿ, ಮೌಲ್ಯ, ಅಪೂರ್ವ, ಅನನ್ಯ ಪ್ರಾರ್ಥಿಸಿದರು.


ಸಹಶಿಕ್ಷಕಿ ತುಳಸಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.ಶಿಕ್ಷಕಿಯರಾದ ಗೀತಾ ಹಾಗೂ ಸವಿತ ಸಹಕರಿಸಿದರು.

LEAVE A REPLY

Please enter your comment!
Please enter your name here