ಸಂತ ಫಿಲೋಮಿನಾ ಕಾಲೇಜಿನಲ್ಲಿ ಇ-ಲರ್ನಿಂಗ್‌ ಮತ್ತು ಅಯಪು ಸ್ಕಿಲ್‌ ತರಬೇತಿ ಕಾರ್ಯಕ್ರಮ

0

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ವ್ಯವಹಾರ ನಿರ್ವಹಣಾ ವಿಭಾಗ ಹಾಗೂ ಇನ್ನೋವೇಶನ್‌ ಕೌನ್ಸಿಲ್‌ಗಳ ಸಂಯುಕ್ತ ಆಶ್ರಯದಲ್ಲಿ ಬಿಬಿಎ ವಿಭಾಗದ ವಿದ್ಯಾರ್ಥಿಗಳಿಗೆ ಇ-ಲರ್ನಿಂಗ್‌ ಮತ್ತು ಅಯಪ್‌ ಸ್ಕಿಲ್‌ ತರಬೇತಿ ಕಾರ್ಯಕ್ರಮವನ್ನು ಕಾಲೇಜಿನ ಸ್ಪಂದನ ಸಭಾಂಗಣದಲ್ಲಿ ಆಯೋಜಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ| ಆಂಟೊನಿ ಪ್ರಕಾಶ್‌ ಮೊಂತೆರೊ “ಕೌಶಲ್ಯ ತರಬೇತಿಯು ವಿದ್ಯಾರ್ಥಿಗಳನ್ನು ಔದ್ಯೋಗಿಕ ಕ್ಷೇತ್ರದ ಬೇಡಿಕೆಗಳಿಗೆ ಸಜ್ಜುಗೊಳಿಸುತ್ತದೆ. ಅವರಲ್ಲಿ ಸಾಮಾಜಿಕ ಕಳಕಳಿ, ಸಕಾರಾತ್ಮಕ ಚಿಂತನೆಗಳನ್ನು ಬಲಗೊಳಿಸಿ ಉತ್ತಮ ವ್ಯಕ್ತಿಗಳಾಗಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

ಕಾಲೇಜಿನ ವ್ಯವಹಾರ ನಿರ್ವಹಣಾ ವಿಭಾಗದ ಮುಖ್ಯಸ್ಥ ಹಾಗೂ ಪ್ಲೇಸ್‌ಮೆಂಟ್‌ ಅಧಿಕಾರಿಡಾ| ರಾಧಾಕೃಷ್ಣ ಗೌಡ, ವಿದ್ಯಾರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿಯ ಅವಶ್ಯಕತೆಯ ಬಗ್ಗೆ ತಿಳಿಸಿದರು.

ಫಿನ್‌ವರ್ಸ್‌ ಸಂಸ್ಥೆಯ ಅಪರ್ಣಾ ಭಟ್‌ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು. ಕಾಲೇಜಿನ ವ್ಯವಹಾರ ನಿರ್ವಹಣಾ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರಶಾಂತ್‌ ರೈ ಸ್ವಾಗತಿಸಿ,
ಕಾಲೇಜಿನ ಇನ್ನೋವೇಶನ್‌ ಕೌನ್ಸಿಲ್‌ನ ಸಂಯೋಜಕ ಅಭಿಷೇಕ್‌ ಸುವರ್ಣ ವಂದಿಸಿದರು.

LEAVE A REPLY

Please enter your comment!
Please enter your name here