ಸಂತ ಫಿಲೋಮಿನಾ ಕಾಲೇಜಿನಲ್ಲಿ ಇಂಗ್ಲೀಷ್‌ ಭಾಷಾ ಕಾರ್ಯಗಾರ- ಸಮಾರೋಪ ಸಮಾರಂಭ

0

ಪುತ್ತೂರು: ಕ್ಯಾಥೋಲಿಕ್‌ ಬೋರ್ಡ್‌ ಆಫ್‌ ಎಜುಕೇಶನ್‌ ಹಾಗೂ ಸಂತ ಫಿಲೋಮಿನಾ ಕಾಲೇಜು ಇವುಗಳ ಸಹಯೋಗದಲ್ಲಿ ಕ್ಯಾಥೊಲಿಕ್‌ ಶಿಕ್ಷಣ ಸಂಸ್ಥೆಗಳ ಅಧೀನದಲ್ಲಿರುವ ಪ್ರಾಥಮಿಕ ಶಾಲಾ ಅಧ್ಯಾಪಕರಿಗೆ 5 ದಿನಗಳ ಇಂಗ್ಲೀಷ್‌ ಭಾಷಾ ಕಾರ್ಯಗಾರವನ್ನು ಆಯೋಜಿಸಲಾಯಿತು.

ಕಾರ್ಯಗಾರದ ಸಮಾರೋಪ ಸಮಾರಂಭ ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ವಿಭಾಗದ ಸಭಾಂಗಣದಲ್ಲಿ ಎ.28ರಂದು ನಡೆಯಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಾಲೇಜಿನ ಪ್ರಾಂಶುಪಾಲ ವಂ| ಡಾ| ಆಂಟೊನಿ ಪ್ರಕಾಶ್‌ ಮೊಂತೆರೋ ಮಾತನಾಡಿ ವಯೋ ಸಹಜ ಸಮಸ್ಯೆಗಳನ್ನು ಬದಿಗಿರಿಸಿ ಅಧ್ಯಾಪಕ ವೃತ್ತಿಯಲ್ಲಿ ನಿರತರಾದವರು ದಿನನಿತ್ಯ ಹೊಸ ವಿಷಯಗಳನ್ನು ಕಲಿತುಕೊಳ್ಳಬೇಕು. ತನ್ನ ದಿನದ ಒಂದೆರಡು ಗಂಟೆಗಳನ್ನು ಓದಿಗಾಗಿ ಮೀಸಲಾಗಿಡಬೇಕು. ಇದರಿಂದ ಖಂಡಿತವಾಗಿಯೂ ಪರಿಣಾಮಕಾರಿಯಾಗಿ ಪಾಠ ಮಾಡಬಹುದು “ ಎಂದರು.


ಕಾರ್ಯಗಾರದಲ್ಲಿ ಭಾಗವಹಿಸಿದ ಸೈಂಟ್‌ ವಿಕ್ಟರ್ಸ್ ಹಿರಿಯ ಪ್ರಾಧಮಿಕ ಶಾಲೆಯ ಮುಖ್ಯ ಗುರುಗಳಾದ ಹ್ಯಾರಿ ಡಿ ಸೋಜ ಹಾಗೂ ಸಂತ ಫಿಲೋಮಿನಾ ಹಿರಿಯ ಪ್ರಾಧಮಿಕ ಶಾಲೆಯ ಮುಖ್ಯ ಗುರು ಇವ್ಲಿನ್‌ ಡಿಸೋಜ ರವರು ಕಾರ್ಯಗಾರದ ಬಗಗೆಗಿನ ತಮ್ಮ ಅನುಭವವನ್ನು ಹಂಚಿಕೊಂಡರು.

ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಸಂಚಾಲಕ ವಂ| ಲಾರೆನ್ಸ್‌ ಮಸ್ಕರೇಞಸ್‌ “ಕಲಿಕೆಗೆ ವಯಸ್ಸಿನ ಮಿತಿಯಿಲ್ಲ. ವಿದ್ಯಾರ್ಥಿಯಾಗಲೀ ಅಧ್ಯಾಪಕನಾಗಲೀ ತಮಗೊದಗಿಬಂದ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡಿದ್ದೇ ಆದಲ್ಲಿ ಜೀವನದಲ್ಲಿ ಯಶಸ್ಸು ಸಾಧ್ಯ” ಎಂದು ಹೇಳಿದ ಅವರು 5 ದಿನಗಳ ಕಾರ್ಯಗಾರವನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಕಾಲೇಜಿನ ಇಂಗ್ಲೀಷ್‌ ವಿಭಾಗದ ಉಪನ್ಯಾಸಕರಿಗೆ ಹಾಗೂ ಮಾರ್ಗದರ್ಶನ ನೀಡಿದ ಕಾಲೇಜಿನ ಪ್ರಾಂಶುಪಾಲರು ಹಾಗೂ ಕ್ಯಾಥೊಲಿಕ್‌ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಅಭಿನಂದನೆ ಸಲ್ಲಿಸಿದರು.


ಕಾಲೇಜಿನ ಪ್ರದರ್ಶನಕಲಾ ಘಟಕದ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಕ್ಯಾಂಪಸ್‌ ನಿರ್ದೇಶಕರು ಮತ್ತು ಇಂಗ್ಲೀಷ್‌ ವಿಭಾಗದ ಉಪನ್ಯಾಸಕ ವಂ| ಸ್ಟ್ಯಾನಿ ಪಿಂಟೋ ಸ್ವಾಗತಿಸಿ, ಇಂಗ್ಲೀಷ್‌ ವಿಭಾಗದ ಮುಖ್ಯಸ್ಥೆ ಭಾರತಿ ಎಸ್‌ ರೈ ವಂದಿಸಿ, ವ್ಯವಹಾರ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರಶಾಂತ್‌ ರೈ ಕಾರ್ಯಕ್ರಮ ನಿರ್ವಹಿಸಿದರು. ಇಂಗ್ಲೀಷ್‌ ವಿಭಾಗದ ಉಪನ್ಯಾಸಕಿ ನೋವೆಲಿನ್‌ ಡಿಸೋಜ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here