ಶಶಿಕುಮಾರ್ ರೈ ಬಾಲ್ಯೊಟ್ಟು ಮನೆಯಲ್ಲಿ ಬಿಜೆಪಿ ಪ್ರಚಾರ ಸಭೆ

0


*ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಭಾಗಿ

ಬೆಟ್ಟಂಪಾಡಿ: ಪಾಣಾಜೆ ಮಹಾ ಶಕ್ತಿ ಕೇಂದ್ರದ ಬಿಜೆಪಿ ಚುನಾವಣಾ ಪ್ರಚಾರ ಸಭೆಯು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟುರವರ ಮನೆಯಲ್ಲಿ ಮೇ 2ರಂದು ನಡೆಯಿತು.

ಕರ್ನಾಟಕ ಮಾಜಿ ಮುಖ್ಯಮಂತ್ರಿ, ಸಂಸದ ಡಿ.ವಿ. ಸದಾನಂದ ಗೌಡರವರು ಪಕ್ಷದ ಪ್ರಮುಖರಿಗೆ, ಕಾರ್ಯಕರ್ತರಿಗೆ ಪಕ್ಷ ಸಂಘಟನೆಯ ಬಗ್ಗೆ ಮಾತನಾಡಿದರು.


ಶಾಸಕ ಸಂಜೀವ ಮಠಂದೂರು, ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾಧ್ಯಕ್ಷ ಆರ್ ಸಿ ನಾರಾಯಣ್, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮತ್ತಿತರರು ಉಪಸ್ಥಿತರಿದ್ದರು‌. ಪಾಣಾಜೆ, ನಿಡ್ಪಳ್ಳಿ, ಬೆಟ್ಟಂಪಾಡಿ ಮತ್ತು ಇರ್ದೆ ಗ್ರಾಮದ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡರು.

LEAVE A REPLY

Please enter your comment!
Please enter your name here