ಪುತ್ತೂರು ಮೂಲದ ಮೈಸೂರು ನಿವಾಸಿ ಸುಬ್ರಹ್ಮಣ್ಯ ರೈ ನಿವಾಸಕ್ಕೆ ಐಟಿ ದಾಳಿ

0

ಪುತ್ತೂರು: ಪುತ್ತೂರು ಮೂಲದ ಮೈಸೂರು ನಿವಾಸಿ ಕೆ.ಸುಬ್ರಹ್ಮಣ್ಯ ರೈ ಎಂಬುವವರ ಮನೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಐಟಿ ಅಧಿಕಾರಿಗಳು ಕೆ.ಸುಬ್ರಹ್ಮಣ್ಯ ರೈ ಎಂಬುವವರ ಮನೆಗೆ ದಾಳಿ ನಡೆಸಿದ್ದು, ಅವರ ಮನೆಯಂಗಳದಲ್ಲಿದ್ದ ಗಿಡದಲ್ಲಿ ನೇತು ಹಾಕಿ ಅಡಗಿಸಿಡಲಾಗಿದ್ದ ಒಂದು ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಐಟಿ ಅಧಿಕಾರಿಗಳು ದಾಳಿ ನಡೆಸಿ ಮರದಲ್ಲಿ ನೇತು ಹಾಕಿ ಅಡಗಿಸಿಟ್ಟಿದ್ದ ಹಣವನ್ನು ವಶಪಡಿಸಿಕೊಂಡಿರುವ ಫೋಟೋಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಐಟಿ ದಾಳಿಗೆ ಒಳಗಾಗಿರುವ ಸುಬ್ರಹ್ಮಣ್ಯ ರೈ ಅವರು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ಸಹೋದರರಾಗಿದ್ದಾರೆ.

LEAVE A REPLY

Please enter your comment!
Please enter your name here