ಮೇ 6ಕ್ಕೆ ಯೋಗಿ ಆದಿತ್ಯನಾಥ್ ರೋಡ್ ಶೋ-ಕಾರ್ಯಕ್ರಮದ ಯಶಸ್ವಿಗೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

0

ಪುತ್ತೂರು: ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಪರವಾಗಿ ಮೇ 6 ರಂದು ಪುತ್ತೂರಿನಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ರೋಡ್ ಶೋ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದ ಯಶಸ್ವಿಗಾಗಿ ಬಿಜೆಪಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.


ಶಾಸಕ ಸಂಜೀವ ಮಠಂದೂರು, ಕರಾವಳಿ ಅಭಿವೃದ್ಧಿಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್, ಬಿಜೆಪಿ ಚುನಾವಣಾ ಮಾದ್ಯಮ ಪ್ರಮುಖ್ ಚಂದ್ರಶೇಖರ್ ರಾವ್ ಬಪ್ಪಳಿಗೆ, ನಗರಸಭೆ ಸದಸ್ಯೆ ಪ್ರೇಮಲತಾ ನಂದಿಲ, ಬಿಜೆಪಿ ಅಭ್ಯರ್ಥಿ ಚುನಾವಣಾ ಎಜೆಂಟ್ ರಾಜೇಶ್ ಬನ್ನೂರು, ಮಾದವ ಪೂಜಾರಿ, ಹೆಚ್.ಉದಯ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರು ಪ್ರಾರ್ಥನೆ ಸಲ್ಲಿಸಿದರು.

LEAVE A REPLY

Please enter your comment!
Please enter your name here