ಅನ್ಯಾಯ ಮಾಡಿದವರನ್ನು ಮಹಾಲಿಂಗೇಶ್ವರ ಮತ್ತು ಮಹಿಷಮರ್ದಿನಿ ನೋಡಿಕೊಳ್ಳುತ್ತಾರೆ- ಅಶೋಕ್ ರೈ

0

*ಆರೋಪ ಮಾಡುವವರ ವಿರುದ್ಧ ಕದ್ರಿ ಠಾಣೆಗೆ ದೂರು ನೀಡಿದ್ದೇನೆ

*ಮಾನನಷ್ಟ ಮುಖದ್ದಮೆ ದಾಖಲಿಸಿದ್ದೇನೆ

*ಕಾಂಗ್ರೆಸ್ ಪಕ್ಷದ ಯೋಜನೆಗಳನ್ನು ಜನರು ಒಪ್ಪಿಕೊಂಡಿದ್ದಾರೆ

*ಕಳೆದ ಐದು ವರ್ಷಗಳಲ್ಲಿ ಬಿಜೆಪಿ ಮಾಡಿದ ಭ್ರಷ್ಟಾಚಾರದಿಂದ ಜನ ರೋಸಿ ಹೋಗಿದ್ದಾರೆ

ಪುತ್ತೂರು: ಹಣಕೊಡಲು ಬಾಕಿ ಇದೆ ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಬಿಡುತ್ತಿರುವವರ ವಿರುದ್ಧ ಮಂಗಳೂರಿನ ಕದ್ರಿ ಠಾಣೆಗೆ ದೂರು ನೀಡಿದ್ದೇನೆ. ಮಾತ್ರವಲ್ಲ, ಮಾನನಷ್ಟ ಮುಖದ್ದಮೆಯನ್ನು ದಾಖಲಿಸಿದ್ದೇನೆ ಎಂದು ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ಹೇಳಿದ್ದಾರೆ.

ಸುದ್ದಿ ಪ್ರತಿನಿಧಿಯೊಂದಿಗೆ ಮಾತನಾಡಿದ ಅಶೋಕ್ ರೈ , ಈ ಬಾರಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ತನ್ನ ಅಸ್ತಿತ್ವ ಕಳೆದು ಕೊಳ್ಳುವ ಸ್ಥಿತಿಗೆ ಬಂದಿದ್ದು ಸೋಲು ಕಟ್ಟಿಟ್ಟ ಬುತ್ತಿ ಎಂಬ ಆರಿವಾಗಿದೆ. ಅದಕ್ಕೆ ನನಗೆ ಬೇರೆ ಬೇರೆ ರೀತಿಯಲ್ಲಿ ಹಿಂಸೆ ಕೊಡುವ ಭಾಷಣ ತಿರಿಚುವ, ತಿರಿಚಿ ಹೇಳುವ ಪ್ರಯತ್ನ ಮಾಡುತ್ತಿದ್ದಾರೆ. ಮಾತ್ರವಲ್ಲ, ನಾನು ಹಣ ಕೊಡಲು ಬಾಕಿಯಿದೆ ಎಂದು ಹೇಳಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡಲಾಗುತ್ತಿದೆ. ಹಣಕ್ಕೆ ಡಿಮ್ಯಾಂಡ್ ಮಾಡಲಾಗುತ್ತಿದೆ. ಈ ರೀತಿ ಹಣ ಬಾಕಿ ಇದೆ ಎಂದು ಹೇಳುವವರು ದೂರ ನೀಡಲಿ, 10 ವರ್ಷದಿಂದ ಯಾಕೆ ದೂರ ನೀಡಿಲ್ಲ ಎಂದು ಪ್ರಶ್ನಿಸಿದ ಅಶೋಕ್‌ ರೈ, ಯಾವುದೇ ದಾಖಲೆಗಳಿಲ್ಲದೆ ಈ ರೀತಿ ವಿಡಿಯೋ ಮಾಡಿ ಹರಿಯು ಬಿಟ್ಟರೆ ಜನರು ನಂಬುವುದಿಲ್ಲ. ನಾನು ನಂಬಿರುವ ಮಹಾಲಿಂಗೇಶ್ವರ ಮತ್ತು ಮಹಿಷಮರ್ದಿನಿ ಅವರನ್ನು ನೋಡಿಕೊಳ್ಳುತ್ತಾರೆ ಎಂದು ಭಾವುಕರಾಗಿ ಹೇಳಿದರು.

ಪಕ್ಷದ ಕಾರ್ಯಕರ್ತರು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದು, ಜನ ಕಾಂಗ್ರೆಸ್ ಪಕ್ಷದ ಯೋಜನೆಗಳನ್ನು ಒಪ್ಪಿಕೊಂಡಿದ್ದಾರೆ. ಕಳೆದ 5 ವರ್ಷಗಳಲ್ಲಿ ಬಿಜೆಪಿ ಮಾಡಿದ ಭ್ರಷ್ಟಾಚಾರದಿಂದ ಜನ ಬೇಸತ್ತಿದ್ದಾರೆ. ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಜನರು ಆಶೀರ್ವಾದ ಮಾಡುತ್ತಾರೆ ಎನ್ನುವ ನಂಬಿಕೆ ಇದೆ ಎಂದು ಅವರು ಹೇಳಿದರು.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here