ಪಕ್ಷೇತರ ಅಭ್ಯರ್ಥಿಯಿಂದ ಬಿಜೆಪಿ ನಾಯಕರ ಭಾವಚಿತ್ರ ಬಳಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ – ದೂರು

0

ಪುತ್ತೂರು: ಪಕ್ಷೇತರ ಅಭ್ಯರ್ಥಿಯು ಬಿಜೆಪಿಯ ನಾಯಕರ ಭಾವಚಿತ್ರಗಳನ್ನು ಪ್ರಚಾರದಲ್ಲಿ ಬಳಸಿಕೊಳ್ಳುತ್ತಿದ್ದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವುದಾಗಿ ಬಿಜೆಪಿ ಅಭ್ಯರ್ಥಿಯ ಚುನಾವಣಾ ಎಜೆಂಟ್ ರಾಜೇಶ್ ಬನ್ನೂರು ಅವರು ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.


206 ಮತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಕರ್ನಾಟಕ ವಿಧಾನ ಸಭೆಗೆ ಮೇ 10 ರಂದು ಚುನಾವಣೆ ನಡೆಯಲಿದ್ದು, ಭಾರತೀಯ ಜನತಾ ಪಾರ್ಟಿಯಿಂದ ಶ್ರೀಮತಿ ಆಶಾ ತಿಮ್ಮಪ್ಪರವರು ಸ್ಪರ್ಧಿಸುತ್ತಿದ್ದಾರೆ. ಕ್ರಮ ಸಂಖ್ಯೆ 7 ರಲ್ಲಿ ಆರುಣ್‌ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಅವರಿಗೆ “ಬ್ಯಾಟ್” ಚಿಹ್ನೆಯನ್ನು ನೀಡಲಾಗಿದೆ. ಆದರೆ ಪಕ್ಷೇತರ ಅಭ್ಯರ್ಥಿಯಾದ ಅರುಣ್ ಕುಮಾರ್ ಪುತ್ತಿಲರವರು ಹಾಗೂ ಅವರ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಭಾರತೀಯ ಜನತಾ ಪಾರ್ಟಿಯ ನೇತಾರರ ಭಾವ ಚಿತ್ರಗಳನ್ನು ಬಳಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿರುತ್ತದೆ. ಈ ಕುರಿತು ಸಾಮಾಜಿಕ ಜಾಲತಾಣ ಫೇಸ್ ಬುಕ್ ಮತ್ತು ವಾಟ್ಸಾಪ್ ನಲ್ಲಿ ಬಂದಿರುವ ಚಿತ್ರಗಳ‌ ದಾಖಲೆಯ‌ನ್ನು ದೂರಿನೊಂದಿಗೆ ಲಗತ್ತಿಸಿದ್ದಾರೆ. ‌

ಜನತಾ ಫೋಟೋಗಳನ್ನು ಪ್ರಚಾರದಲ್ಲಿ ಉಪಯೋಗಿಸುವಂತಿಲ್ಲದಿದ್ದರೂ, ಭಾರತೀಯ ಜನತಾ ಪಾರ್ಟಿಯ ನಾಯಕರ ಭಾವಚಿತ್ರಗಳನ್ನು ಬಳಸುತ್ತಿದ್ದು, ಇದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿರುತ್ತದೆ. ಭಾವಚಿತ್ರಗಳ ಸ್ಕ್ರೀನ್, ಶಾಟ್‌ಗಳ ಪ್ರಿಂಟ್‌ಗಳನ್ನು ಇದರೊಂದಿಗೆ ಲಗೀಕರಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ನಿಟ್ಟಿನಲ್ಲಿ ಸೂಕ್ತ ಪರಿಶೀಲನೆ ಮಾಡಿ ಚಿನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಮತ್ತು ಅವರ ಬೆಂಬಲಿಗರ ವಿರುದ್ಧ ಸೂಕ್ತ ಕಾನೂನು ಕ್ರಮ‌ಕೈಗೊಳ್ಳುವಂತೆ ಅವರು ದೂರಿನಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here