ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಮಾಜಿ ಅಧ್ಯಕ್ಷ, ರಾಧಾಕೃಷ್ಣ ಭಕ್ತ ನಿಧನ

0

ಪುತ್ತೂರು:ಪುತ್ತೂರು ವಿದ್ಯಾವರ್ಧಕ ಸಂಘ ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘದಲ್ಲಿ ಅಧ್ಯಕ್ಷರಾಗಿ ಮತ್ತು ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಉದ್ಯಮಿ, ಸಂಘಟನಾ ಚತುರ ರಾಧಕೃಷ್ಣ ಭಕ್ತ(71ವ) ಮೆ.4ರಂದು ನಿಧನರಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ನಗರದ ಖಾಸಗಿ ಅಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಜನಸಂಘದ ಕಾಲದಲ್ಲಿ ಸಕ್ರೀಯರಾಗಿದ್ದು ತಮ್ಮ ಮನೆಯನ್ನೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಾಲಯ ಮಾಡಿಕೊಂಡಿದ್ದ ದಿ. ದೇವದಾಸ್ ಭಕ್ತ ಅವರ ಪುತ್ರ ರಾಧಾಕೃಷ್ಣ ಭಕ್ತ ತನ್ನ ತಂದೆಯ ಮಾರ್ಗದರ್ಶದನಲ್ಲೇ ಮುಂದುವರಿದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರಾಗಿದ್ದರು.ಪುತ್ತೂರಿನಲ್ಲಿ ವಿವೇಕಾನಂದ ಇಂಜಿನಿಯರಿಂಗ್‌ ಕಾಲೇಜ್‌ ಸ್ಥಾಪನೆಯ ಮುಖ್ಯ ರೂವಾರಿಯಾಗಿ, ಸಂಚಾಲಕರಾಗಿ, ಪುತ್ತೂರು ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನದ ಮಾಜಿ ಆಡಳಿ ಮೋಕ್ತೇಸರಾಗಿದ್ದು ,ಅಖಿಲ ಭಾರತ ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯ ದೇವಾಲಯಗಳ ಒಕ್ಕೂಟದ ಉಪಾಧ್ಯಕ್ಷರಾಗಿದ್ದು, ಹಲವು ಸಾಮಾಜಿಕ, ಧಾರ್ಮಿಕ ಕಾರ್ಯದಲ್ಲಿ ಸೇವೆ ಸಲ್ಲಿಸಿದ್ದಾರೆ.

ಮೃತರು ಪತ್ನಿ ಲಕ್ಷ್ಮಿ ಭಕ್ತ, ಪುತ್ರಿ ಅಶ್ವಿನಿ ಭಕ್ತ, ಸಹೋದರರಾದ ಯೋಗೀಶ್ ಭಕ್ತ, ಗುರುದತ್ತ್ ಭಕ್ತ ಮತ್ತು ನಾಲ್ವರು ಸಹೋದರಿಯರನ್ನು ಅಗಲಿದ್ದಾರೆ.


ನಾಳೆ(ಮೇ5 ಕ್ಕೆ) ಅಂತ್ಯಕ್ರಿಯೆ
ರಾಧಾಕೃಷ್ಣ ಭಕ್ತ ಅವರ ಪ್ರಾರ್ಥಿವ ಶರೀರವನ್ನು ಕೋರ್ಟ್ ರಸ್ತೆಯಲ್ಲಿರುವ ಮನೆಯಲ್ಲಿ ಇರಿಸಲಾಗಿದ್ದು, ಮೇ 5ರಂದು ಬೆಳಿಗ್ಗೆ ಗಂಟೆ 7ಕ್ಕೆ ಅಂತ್ಯಸಂಸ್ಕಾರ ಮಾಡಲಾಗುವುದು ಎಂದು ಮೃತರ ಸಹೋದರ ಯೋಗೀಶ್ ಭಕ್ತ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here