ಮೇ9,10: ವಿಧಾನಸಭಾ ಚುನಾವಣೆಗೆ ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದಿಂದ ಬಸ್‌ಗಳ ನಿಯೋಜನೆ- ಬಸ್ ಸಂಚಾರದಲ್ಲಿ ವ್ಯತ್ಯಯ

0

ಪುತ್ತೂರು: ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಅಂಗವಾಗಿ ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ, ಮಡಿಕೇರಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾ ಕಾರ್ಯಕ್ಕಾಗಿ ಕೆಎಸ್‌ಆರ್‌ಟಿಸಿ ನಿಗಮದ ಬಸ್ಸುಗಳನ್ನು ಒದಗಿಸಲಾಗುತ್ತಿದ್ದು ಮೇ.9 ಮತ್ತು 10 ರಂದು ವ್ಯತ್ಯಯ ಉಂಟಾಗುತ್ತದೆ ಎಂದು ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ಮೇ10ರಂದು ಜರಗಲಿರುವ ವಿಧಾನಸಭಾ ಸಾರ್ವತ್ರಿಕ ಚುನಾವಣಿ-2023ರ ಸಂಬಂಧ ಮತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ, ಮಡಿಕೇರಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾ ಕಾರ್ಯಗಳಿಗೆ ಹಾಗೂ ಪೊಲೀಸ್ ಬಂದೋಬಸ್ತ್‌ಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗದಿಂದ ಗರಿಷ್ಠ ಸಂಖ್ಯೆಯಲ್ಲಿ ಬಸ್ಸುಗಳನ್ನು ನಿಯೋಜಿಸಲಾಗಿರುತ್ತದೆ. ಆದುದರಿಂದ ಸದರಿ ದಿನದಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗದ ವ್ಯಾಪ್ತಿಯಲ್ಲಿ ಬರುವ ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ, ಕಡಬ, ಮಡಿಕೇರಿ, ವಿರಾಜಪೇಟೆ, ಕುಶಾಲನಗರ, ಸೋಮವಾರಪೇಟೆ, ತಾಲೂಕುಗಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯಾಗುತ್ತಿರುವ ನಿಗಮದ ಕಾರ್ಯಾಚರಣೆಯಲ್ಲಿ ಮೇ.9 ಹಾಗೂ 10ರಂದು ವ್ಯತ್ಯಯ ಉಂಟಾಗುತ್ತದೆ. ಸಾರಿಗೆಗಳ ಈ ದಿಶೆಯಲ್ಲಿ ಸಾರ್ವಜನಿಕ ಪ್ರಯಾಣಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಕರಾರಸಾ ನಿಗಮದೊಂದಿಗೆ ಸಹಕರಿಸಬೇಕೆಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here