ಪುತ್ತೂರು: ಬಸ್ ನಿಲ್ದಾಣದ ಬಳಿ ಹಿಂದು ವಿದ್ಯಾರ್ಥಿನಿಯೊಂದಿಗೆ ಜ್ಯೂಸ್ ಕುಡಿಯುತ್ತಿದ್ದ ಅನ್ಯಕೋಮಿನ ವಿದ್ಯಾರ್ಥಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ನಾಲ್ವರು ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ರಿಕ್ಷಾ ಚಾಲಕ ದಿನೇಶ್, ವಿದ್ಯಾರ್ಥಿಗಳಾದ ಪ್ರಜ್ವಲ್, ನಿಶಾಂತ್ ಮತ್ತು ಪ್ರದೀಪ್ ಎಂಬವರು ಬಂಧಿತ ಆರೋಪಿಗಳಾಗಿದ್ದು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಆರೋಪಿಗಳ ವಕೀಲರಾದ ಮಾಧವ ಪೂಜಾರಿ, ರಾಕೇಶ್ ಬಲ್ನಾಡು, ಮೋಹಿನಿ, ನಿಶಾ ವಾದಿಸಿದರು.