ಮೇ.6-ಬಂಟ್ವಾಳಕ್ಕೆ ಯೋಗಿ ಆದಿತ್ಯನಾಥ್

0

ವಿಟ್ಲ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರವರು ಮೇ.6ರಂದು ಸಾಯಂಕಾಲ ಬಂಟ್ವಾಳಕ್ಕೆ ಆಗಮಿಸಲಿದ್ದಾರೆ. ಬಿ.ಸಿ.ರೋಡ್ ಕೈಕಂಬದಿಂದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದವರೆಗೆ ರೋಡ್ ಶೋದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಹೇಳಿದರು.

ಅವರು ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.

ಸದ್ಯದ ಮಾಹಿತಿ ಪ್ರಕಾರ ಸಾಯಂಕಾಲ 4 ಗಂಟೆಗೆ ಅವರು ಬಂಟ್ವಾಳಕ್ಕೆ ಆಗಮಿಸಲಿದ್ದಾರೆ. ಬಿ.ಸಿ.ರೋಡಿನ ಕೈಕಂಬ ದ್ವಾರದಿಂದ ಬ್ರಹ್ಮಶ್ರೀ ನಾರಾಯಣಗುರು ವೃತ್ತದವರೆಗೆ ರೋಡ್ ಶೋದಲ್ಲಿ ಭಾಗವಹಿಸುವರು. ಬಳಿಕ ಬಿ.ಸಿ.ರೋಡಿನ ಖಾಸಗಿ ಬಸ್ ನಿಲ್ದಾಣದ ಬಳಿ ತೆರೆದ ವಾಹನದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವರು. ಈ ಸಂದರ್ಭ ನಲ್ವತ್ತು ಸಾವಿರದಷ್ಟು ಕಾರ್ಯಕರ್ತರು, ಸಾರ್ವಜನಿಕರು ಸೇರುವ ನಿರೀಕ್ಷೆ ಇದೆ. ಇದಕ್ಕೆ ಪೂರ್ವಭಾವಿಯಾಗಿ ಪಕ್ಷದ ವತಿಯಿಂದ ಸಿದ್ಧತಾ ಸಭೆಗಳನ್ನು ಮಾಡಲಾಗಿದೆ. ಪ್ರತಿ ಬೂತ್ ನಿಂದ ಕನಿಷ್ಠ 100 ಕಾರ್ಯಕರ್ತರು ಆಗಮಿಸಲಿದ್ದು, ಸುಮಾರು 40 ಸಾವಿರದಷ್ಟು ಮಂದಿ ಸೇರುವ ನಿರೀಕ್ಷೆ ಇದೆ. ಮುಂಬರುವ ಚುನಾವಣೆಯಲ್ಲಿ ನಲ್ವತ್ತು ಸಾವಿರ ಅಂತರದಲ್ಲಿ ಗೆಲುವು ಸಾಧಿಸಲು ಪ್ರಯತ್ನದಲ್ಲಿದ್ದೇವೆ. ಸೋಲಿನ ಭೀತಿಯಲ್ಲಿ ಕಾಂಗ್ರೆಸ್ ವಿವಿಧ ಹೇಳಿಕೆ ನೀಡುತ್ತಿದ್ದು ಸುಳ್ಳು ಅಪಪ್ರಚಾರ ಮಾಡುತ್ತಿದೆ. ಮತದಾರರು ಪ್ರಬುದ್ಧರಾಗಿದ್ದು, ರಾಜೇಶ್ ನಾಯ್ಕ್ ಅವರ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿದ್ದಾರೆ ಎಂದರು.ಪುರಸಭೆ ಹಿರಿಯ ಸದಸ್ಯ‌ ಗೋವಿಂದ ಪ್ರಭು, ಚಿದಾನಂದ ರೈ, ಪುರುಷೋತ್ತಮ ಶೆಟ್ಟಿ, ಹರಿದಾಸ್, ರವೀಶ್ ಶೆಟ್ಟಿ ಕರ್ಕಳ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here