ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್‌ ರೈ ಬಿರುಸಿನ ಪ್ರಚಾರ-ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ

0

ಪುತ್ತೂರು: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ದಿನ ಸಮೀಪಿಸುತ್ತಿದ್ದು, ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದೆ. ಮತ ಬೇಟೆಗೆ ಇಳಿದಿರುವ ಅಭ್ಯರ್ಥಿಗಳು ಕ್ಷೇತ್ರದಾದ್ಯಂತ ಸಂಚರಿಸಿ, ಜನರ ಮನವೊಲಿಸಿ ಮತಯಾಚನೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕ್ಷೇತ್ರದ ಹಲವೆಡೆ ಮಿಂಚಿನ ಸಂಚಾರ ನಡೆಸಿ ಮತಯಾಚನೆ ಮಾಡಿದರು. ಇದರೊಂದಿಗೆ ಹಲವು ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ, ಅಭಯ ಯಾಚಿಸಿದರು.

ಪಡ್ನೂರು ಅಶ್ವಥ ಕಟ್ಟೆಯಲ್ಲಿ ಅಶ್ವಥ ಪೂಜೆ ಮಾಡಿ ಪ್ರಸಾದ ಸ್ವೀಕರಿಸಿದ್ದರು. ಈ ವೇಳೆ ಪಕ್ಷದ ಮುಖಂಡರು ಅಭಿಮಾನಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

ಪುತ್ತೂರು: ಪಡ್ನೂರು ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿದ ಅಶೋಕ್ ರೈ ಪ್ರಾರ್ಥನೆ ಸಲ್ಲಿಸಿ ಅಭಯ ಯಾಚಿಸಿದರು.

  1. ಪುತ್ತೂರು: ಪಡ್ನೂರು ಮಾದಗ ಜನಾರ್ಧನ ದೇವಸ್ಥಾನಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.
  1. ಪುತ್ತೂರು: ಆರ್ಯಾಪು ಗ್ರಾಮದ ಕುಂಜೂರು ಪಂಜ ದಲಿತ ಕಾಲೋನಿಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್‌ ರೈ ಕಾಲೋನಿ ಜನರಲ್ಲಿ ಮಾತುಕತೆ ನಡೆಸಿ, ಮತಯಾಚನೆ ಮಾಡಿದರು.
  1. ಸ್ಥಳೀಯ ದೈವದ ಗುಡಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಅಭಯ ಯಾಚಿಸಿದರು.

LEAVE A REPLY

Please enter your comment!
Please enter your name here