ರಾಮಕುಂಜ – ಪದವಿ ಕಾಲೇಜುನಲ್ಲಿ ವಾರ್ಷಿಕೋತ್ಸವದ ಬಹುಮಾನ ವಿತರಣೆ

0

ರಾಮಕುಂಜ: ಉತ್ತಮ ಮಟ್ಟದ ಅರಿವು ಹಾಗೂ ಕಾರ‍್ಯಕೌಶಲಗಳನ್ನು ಪದವೀಧರ ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು. ಔದ್ಯೋಗಿಕ ರಂಗ ಸ್ಪರ್ಧಾತ್ಮಕವಾಗಿದೆ. ವಿದ್ಯಾರ್ಥಿಗಳು ತಮ್ಮ ಅರ್ಹತೆಯನ್ನು ಹೆಚ್ಚಿಸಿಕೊಳ್ಳಲು ಸದಾ ಯತ್ನಿಸಬೇಕು ಎಂದು ಉಪ್ಪಿನಂಗಡಿ ವ್ಯವಸಾಯಿಕ ಸಹಕಾರಿ ಸಂಘದ ಅಧ್ಯಕ್ಷ ಕೆ.ವಿ ಪ್ರಸಾದ್ ಹೇಳಿದರು.


ಅವರು ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದಲ್ಲಿ ವಾರ್ಷಿಕೋತ್ಸವದ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಅಭ್ಯಾಗತರಾಗಿ ಭಾಗವಹಿಸಿ ಮಾತನಾಡಿದರು. ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಸುಂದರ ಶೆಟ್ಟಿಯವರು ಮಾತನಾಡಿ, ವಿದ್ಯಾರ್ಥಿಗಳು ಚಾರಿತ್ರ್ಯವಂತ ನಾಗರಿಕರಾಗಿ ಬೆಳೆಯಬೇಕು. ಸಮಾಜಮುಖಿಯಾಗಿ ಚಿಂತಿಸುವವರಾಗಿರಬೇಕು ಎಂದು ಕರೆ ನೀಡಿದರು. ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭೆಯ ಸದಸ್ಯ ಲಕ್ಷ್ಮೀನಾರಾಯಣ ರಾವ್, ರಕ್ಷಕ-ಶಿಕ್ಷಕ ಸಂಘದ ಮಾಜಿ ಅಧ್ಯಕ್ಷ ದಿವಾಕರ ರಾವ್ ಪಂಚವಟಿ ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಆಡಳಿತ ಮಂಡಳಿಯ ಕಾರ್ಯದರ್ಶಿ ರಾಧಾಕೃಷ್ಣ ಕೆ.ಎಸ್. ಅವರು ಮಾತನಾಡಿ, ಸೋಲಿಗೆ ಎದೆಗುಂದದೆ ಅದನ್ನೇ ಪಂಥಾಹ್ವಾನವಾಗಿ ಸ್ವೀಕರಿಸುವ ಹೋರಾಟದ ಛಲ ಯುವಕರಲ್ಲಿರಬೇಕು. ವಿದ್ಯಾಭ್ಯಾಸವು ಕೇವಲ ಅಂಕಗಳಿಕೆಗೆ ಸೀಮಿತವಾಗದೆ, ಅಪಾರ ಲೋಕಾನುಭವವನ್ನು ಮಾಡಿಕೊಳ್ಳುವ ಅವಕಾಶವಾಗಿ ವಿಸ್ತರಿಸಲಿ ಎಂದು ಹೇಳಿದರು. ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳ ಬಹುಮಾನಗಳನ್ನು ವಿಜೇತರಿಗೆ ವಿತರಿಸಲಾಯಿತು.
ಕಾಲೇಜು ಪ್ರಾಂಶುಪಾಲ ಗಣರಾಜ ಕುಂಬ್ಳೆ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕ ದಯಾನಂದ್ ವಂದಿಸಿದರು. ಉಪನ್ಯಾಸಕ ಕೃಷ್ಣಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಜಯಶ್ರೀ, ದೈಹಿಕ ಶಿಕ್ಷಣ ನಿರ್ದೇಶಕ ಗಣೇಶ್ ಸಹಕರಿಸಿದರು.

LEAVE A REPLY

Please enter your comment!
Please enter your name here