109ನೇ ಕ.ಸಾ.ಪ ಸಂಸ್ಥಾಪನಾ ದಿನಾಚರಣೆ ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳೆಸಿ – ಆಶಾ ಬೆಳ್ಳಾರೆ

0

ಪುತ್ತೂರು: ವಿದ್ಯಾರ್ಥಿಗಳು ತಮ್ಮ ಬಿಡುವಿನ ಸಮಯದಲ್ಲಿ ಒಳ್ಳೆಯ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು, ಪ್ರತಿ ಮನೆಯಲ್ಲೂ ಪುಟ್ಟ ಗ್ರಂಥಾಲಯವಿರಬೇಕು ಎಂದು ಪ್ರಗತಿ ಸ್ಟಡಿ ಸೆಂಟರ್ನಲ್ಲಿ ನಡೆದ 109ನೆಯ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯಲ್ಲಿ ತಮ್ಮ ಅಧ್ಯಕ್ಷೀಯ ನುಡಿಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಆಶಾ ಬೆಳ್ಳಾರೆಯವರು ತಿಳಿಸಿದರು.

ತಾಲೂಕು ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಗಳಾದ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಅವರು1915 ಮೇ 5 ರಂದು ಸ್ಥಾಪನೆಗೊಂಡು ಕನ್ನಡ ಸಾಹಿತ್ಯ ಪರಿಷತ್ತು ಬೆಳೆದು ಬಂದ ಬಗ್ಗೆ ಹಾಗೂ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ವಿಶೇಷತೆಯ ಕುರಿತಾಗಿ ಉಪನ್ಯಾಸ ನೀಡಿದರು.

ಸಂತ ಫಿಲೋಮೀನಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ವಿಜಯ ಕುಮಾರ ಮೊಳೆಯಾರ ಅವರು ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವುದರ ಮೂಲಕ ಉದ್ಘಾಟಿಸಿ ಕನ್ನಡ ಸಾಹಿತ್ಯ ಪರಿಷತ್ತನ್ನು ಬೆಳೆಸುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ ಎಂದು ಕಿವಿ ಮಾತನ್ನು ಹೇಳಿ ಶುಭ ಹಾರೈಸಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಮಾನಕ ಜ್ಯುವೆಲ್ಲರ್ಸ್ ಇದರ ಮಾಲಕರಾದ ಯುವ ಸ್ವರ್ಣೋದ್ಯಮಿ ಶ್ರೀ ಸಿದ್ಧನಾಥ ಅವರು ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು. ಪ್ರಗತಿ ಸ್ಟಡಿ ಸೆಂಟರ್ ನ ಸಂಚಾಲಕರಾದ ಶ್ರೀ ಗೋಕುಲನಾಥ್ ಮತ್ತು ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಪ್ರೇಮಲತಾ ಗೋಕುಲ್ ನಾಥ್ ಅವರು ಅತಿಥಿಗಳನ್ನು ಕನ್ನಡ ಶಾಲು ಹಾಗೂ ಪುಸ್ತಕ ಸ್ಮರಣಿಕ್ಕೆ ನೀಡಿ ಸ್ವಾಗತಿಸಿದರು . ತಾಲೂಕು ಕಸಾಪ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಅವರು ಪ್ರಾಸ್ತಾವಿಕ ನುಡಿಗಳನ್ನು ಆಡಿದರು, ಶ್ರೀಮತಿ ಸುಷ್ಮಾ ಅವರು ಕಾರ್ಯಕ್ರಮ ನಿರೂಪಿಸಿದರು. ಹಿತೇಶ್ ಅವರು ಧನ್ಯವಾದಗೈದರು. ಪರಿಷತ್ತಿನ ಕಾರ್ಯಕಾರಿ ಸಮಿತಿ ಸದಸ್ಯರಾದ ಶಂಕರಿ ಶರ್ಮ, ಶಾಂತ ಪುತ್ತೂರು, ಪ್ರಗತಿ ಸಂಸ್ಥೆಯ ಮಾಧವಿ, ಮಧುಶ್ರೀ, ಶುಭಲಕ್ಷ್ಮಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here