ಪುತ್ತೂರು: ಸುಮಾರು 800 ವರ್ಷಗಳ ಇತಿಹಾಸವಿರುವ ಆರ್ಯಾಪು ಗ್ರಾಮದ ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆದ ವರ್ಷಾವಧಿ ಉತ್ಸವಗಳು ಮೇ.3 ರಂದು ರಾತ್ರಿ ದೈವಗಳ ನೇಮೋತ್ಸವದೊಂದಿಗೆ ಸಂಪನ್ನಗೊಂಡಿತು.
ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ನಡೆದ ಜಾತ್ರೋತ್ಸವದಲ್ಲಿ ಎ.29ರಂದು ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಭಕ್ತಾದಿಗಳಿಂದ ಹೊರೆಕಾಣಿಕೆ ಸಮರ್ಪಣೆ ಹಾಗೂ ದೇವರಿಗೆ ನೂತನ ಪಲ್ಲಕ್ಕಿಯ ಸಮರ್ಪಣೆಗೊಂಡಿತು. ಮೇ.2ರಂದು ಬೆಳಿಗ್ಗೆ ಗಣಪತಿ ಹೋಮ, ವಿಶೇಷ ಪೂಜೆ, ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ಮಹಾಪೂಜೆ, ಶ್ರೀಭೂತ ಬಲಿ ಉತ್ಸವ, ವಸಂತ ಪೂಜೆ, ಅಶ್ವತ್ಥ ಪೂಜೆ, ಕುಂಜೂರು ಬೆಡಿ ಪ್ರದರ್ಶನ ಹಾಗೂ ಅನ್ನಸಂತರ್ಪಣೆ ಬಳಿಕ ಶ್ರೀದುರ್ಗಾ ಫ್ರೆಂಡ್ಸ್ ಕ್ಲಬ್ ಪ್ರಾಯೋಜಕತ್ವದಲ್ಲಿ ಸನ್ನಿಧಿ ಕಲಾವಿದರು ಉಡುಪಿ ಅಭಿನಯದ ’ಅಪ್ಪೆ ಮಂತ್ರದೇವತೆ ತುಳು ಭಕ್ತಿ ಪ್ರಧಾನ ನಾಟಕ ಪ್ರದರ್ಶನಗೊಂಡಿತು.
ಮೇ.3ರಂದು ಬೆಳಿಗ್ಗೆ ಗಣಪತಿ ಹೋಮ, ಶ್ರೀ ದೇವರ ಬಲಿ ಹೊರಟು ದರ್ಶನ ಬಲಿ, ಮಧ್ಯಾಹ್ನ ಬಟ್ಟಲು ಕಾಣಿಕೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ರಂಗಪೂಜೆ, ದೈವಗಳಿಗೆ ತಂಬಿಲ, ದೈವಗಳ ಭಂಡಾರ ತೆಗೆದು, ಅನ್ನಸಂತರ್ಪಣೆ ನಡೆದ ಬಳಿಕ ವ್ಯಾಘ್ರಚಾಮುಂಡಿ ದೈವದ ನೇಮೋತ್ಸವದೊಂದಿಗೆ ಜಾತ್ರೋತ್ಸವ ಸಂಪನ್ನಗೊಂಡಿತು.
ಜಾತ್ರೋತ್ಸವದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕುಂಜೂರಿನ ವಿಶ್ವ ಯುವಕ ವೃಂದ ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ ಭಕ್ತರಿಗೆ ಕಲ್ಲಂಗಡಿ ಜ್ಯೂಸ್ ವಿತರಿಸಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರದೀಪಕೃಷ್ಣ ಬಂಗಾರಡ್ಕ, ಸದಸ್ಯರಾದ ಸದಾನಂದ ರವಿ ಭಟ್, ವಿಶ್ವನಾಥ ಕುಲಾಲ್ ಮಚ್ಚಿಮಲೆ, ಮಹಾಲಿಂಗ ನಾಯ್ಕ ಮಚ್ಚಿಮಲೆ, ಚಂದಪ್ಪ ಪೂಜಾರಿ ಕುಂಜೂರು, ಬಿ.ಆರ್ ಶುಭಕರ ರಾವ್ ಪಿಲಿಪಂಜರ, ಜಿ.ಟಿ ನವೀನ ಕುಮಾರ್ ಗೆಣಸಿನಕುಮೇರು, ಉಮಾವತಿ ಪುರಂದರ ರೈ, ಗೆಣಸಿನಕುಮೇರು, ಲೀಲಾವತಿ ನಾರಾಯಣ ಗೌಡ ಕುಂಜೂರು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರುಗಳು, ವಿವಿಧ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಮುಖಂಡರುಗಳು ಸೇರಿದಂತೆ ಸಾವಿರಾರು ಮಂದಿ ಭಕ್ತಾದಿಗಳು ಜಾತ್ರೋತ್ಸವದಲ್ಲಿ ಭಾಗವಹಿಸಿದ್ದರು.