ಯೋಗಿ ಆದಿತ್ಯನಾಥ್ ರೋಡ್ ಶೋ ಹಿನ್ನೆಲೆ-ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರ ಸೇವೆ

0

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪುತ್ತೂರು ಮೇ 6ರಂದು ಬೆಳಿಗ್ಗೆ ಬಿಜೆಪಿ ಅಭ್ಯರ್ಥಿ ಪರ ಪುತ್ತೂರಿನಲ್ಲಿ ಮಾಡಲಿರುವ ರೋಡ್ ಶೋ ಕಾರ್ಯಕ್ರಮದ ಯಶಸ್ವಿಗಾಗಿ ಬಿಜೆಪಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರ ಸೇವೆ ನೆರವೇರಿಸಲಾಯಿತು.


ಶಾಸಕ ಸಂಜೀವ ಮಠಂದೂರು ಅವರು ಶತರುದ್ರ ಸೇವಾ ಸಂಕಲ್ಪದಲ್ಲಿ ಭಾಗವಹಿಸಿ ತುಪ್ಪದ ದೀಪ ಹಚ್ಚಿದರು. ಈ ಸಂದರ್ಭ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಮಂಗಳೂರು ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಎಸ್ ಅಪ್ಪಯ್ಯ ಮಣಿಯಾಣಿ, ಚಂದ್ರಶೇಖರ್ ರಾವ್ ಬಪ್ಪಳಿಗೆ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಸದಸ್ಯ ಶೇಖರ್‌ನಾರಾವಿ ಉಪಸ್ಥಿತರಿದ್ದರು. ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಸಂಕಲ್ಪ ಕಾರ್ಯಕ್ರಮ ನೆರವೇರಿಸಿದರು.

LEAVE A REPLY

Please enter your comment!
Please enter your name here