ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿಯ ನಿರ್ದೇಶಕ ರಾಧಾಕೃಷ್ಣ ಭಕ್ತರ ಶ್ರದ್ಧಾಂಜಲಿ ಸಭೆ

0

ಮನುಷ್ಯನ ಶರೀರಕ್ಕೆ ಕೊನೆ ಇದೆ, ಚಿಂತನೆಗೆ ಅಲ್ಲ: ಡಾ. ಕಲ್ಲಡ್ಕ ಪ್ರಭಾಕರ್ ಭಟ್

ಪುತ್ತೂರು: ರಾಧಾಕೃಷ್ಣ ಭಕ್ತರದು ಸುಂದರ ವ್ಯಕ್ತಿತ್ವ. ಎಂತಹ ವಿದ್ಯಾರ್ಥಿಗಳನ್ನಾದರೂ ಒಳ್ಳೆಯ ದಾರಿಗೆ ಪರಿವರ್ತಿಸುವ ಮನೋಭಾವನೆ ಇವರದು. ತನ್ನ ಸಂಪೂರ್ಣ ಜೀವನವನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಮುಡಿಪಾಗಿಟ್ಟಿದ್ದ ಇವರು ಅಷ್ಟೇ ಪ್ರಮಾಣದಲ್ಲಿ ವಿದ್ಯಾವರ್ಧಕ ಸಂಘವನ್ನೂ ಸಹ ಪ್ರೀತಿಸುತ್ತಿದ್ದರು. ವಿವೇಕಾನಂದ ಇಂಜಿನಿಯರಿಂಗ್ ಕಾಲೇಜನ್ನು
ಸ್ಥಾಪಿಸಲು ಕಾರಣರಾಗಿ ಅದನ್ನು ಉನ್ನತ ಸ್ಥಿತಿಗೆ ಕೊಂಡೊಯ್ಯುವಲ್ಲಿ ಪ್ರಮುಖವಾದ ಪಾತ್ರ ವಹಿಸಿದುದಲ್ಲದೇ, ವಿವೇಕಾನಂದ ವಿದ್ಯಾವರ್ಧಕ ಸಂಘದ ಹಲವಾರು ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದವರು. ಮನುಷ್ಯನ ಶರೀರಕ್ಕೆ ಕೊನೆ ಇದೆ, ಚಿಂತನೆಗೆ ಹಾಗೂ ವ್ಯಕ್ತಿತ್ವಕ್ಕೆ ಅಲ್ಲ. ಅಪೇಕ್ಷೆ ಇಲ್ಲದೆ ಸಂಸ್ಥೆಯ ಬೆಳವಣಿಗೆಗೆ ಕಾರಣರಾದವರು. ಸಮಾಜದ ಬೆಳವಣಿಗೆಗಾಗಿ ಕೆಲಸ ಮಾಡಿದ ಇವರ ಆತ್ಮಕ್ಕೆ ದೇವರು ಶಾಂತಿ ಕರುಣಿಸಲಿ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಪ್ರಾರ್ಥಿಸಿದರು.

ಅವರು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯಲ್ಲಿ ಆಯೋಜಿಸಲಾದ ರಾಧಾಕೃಷ್ಣ ಭಕ್ತರ ಸಂತಾಪ ಸೂಚನಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಲೋಕಸಭಾ ಸದಸ್ಯ, ಗೋಪಾಲ ಸಿ. ಶೆಟ್ಟಿ ಮಾತನಾಡಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ನಿಷ್ಠಾವಂತ ಸ್ವಯಂಸೇವಕರಾಗಿ, ಶಿಕ್ಷಣ ಕ್ಷೇತ್ರದ ಸಾಧಕರಾಗಿ, ಸೇವೆ ಸಲ್ಲಿಸಿದ ಅವರು ನಮ್ಮೆಲ್ಲರಿಗೆ ಮಾದರಿ. ಭಗವಂತ ಅವರ ಕುಟುಂಬಕ್ಕೆ ನೋವನ್ನು ಬರಿಸುವ ಶಕ್ತಿ ನೀಡಲಿ ಎಂದು ಅವರು ಪ್ರಾರ್ಥಿಸಿದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ. ಎಂ. ಕೃಷ್ಣ ಭಟ್ ಸ್ವಾಗತಿಸಿ, ವಿವೇಕಾನಂದ ಮಹಾವಿದ್ಯಾಲಯದ (ಸ್ವಾಯತ್ತ), ಆಡಳಿತ ಮಂಡಳಿ ಸಂಚಾಲಕ ಮುರಳಿ ಕೃಷ್ಣ ಕೆ . ಎನ್ ವಂದಿಸಿದರು. ಕನ್ನಡ ವಿಭಾಗದ ಉಪನ್ಯಾಸಕ ಡಾ. ಮನಮೋಹನ್ ಕಾರ್ಯಕ್ರಮವನ್ನು ನಿರೂಪಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಸಂಸ್ಥೆಗಳ ಅಧ್ಯಾಪಕ ಹಾಗೂ ಅಧ್ಯಾಪಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here