ನಾಳೆ(ಮೇ7) ಕರಾವಳಿಗೆ ಪ್ರಿಯಾಂಕ ಗಾಂಧಿ

0

ಮಂಗಳೂರು: ಕರಾವಳಿಯ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಮೇ7ರಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಜಿಲ್ಲೆಗೆ ಆಗಮಿಸಲಿದ್ದಾರೆ. ಅವರು ಮೂಲ್ಕಿ ಕೊಲ್ನಾಡು ಮೈದಾನದಲ್ಲಿ ಅಪರಾಹ್ನ ಒಂದು ಗಂಟೆಗೆ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ| ಮಂಜುನಾಥ ಭಂಡಾರಿ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದ್ದಾರೆ. ಡಬ್ಬಲ್ ಇಂಜಿನ್ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಅಗತ್ಯವಿಲ್ಲ. ಈ ರಾಜ್ಯದಲ್ಲಿ ಸಾಕಷ್ಟು ಉತ್ತಮ ಆಡಳಿತ ನೀಡಿ ಮುನ್ನಡೆಸಿದ ಮುಖ್ಯ ಮಂತ್ರಿಗಳು , ನಾಯಕರು ವಿವಿಧ ಪಕ್ಷಗಳಲ್ಲಿ ಇದ್ದಾರೆ ಎಂದು ಮಂಜುನಾಥ್ ಭಂಡಾರಿ ತಿಳಿಸಿದ್ದಾರೆ.

ಈ ಬಾರಿ ಕರಾವಳಿ ಸೇರಿದಂತೆ ರಾಜ್ಯದಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರ ಪಡೆಯಲಿದೆ. ಕರಾವಳಿಯ ಭಾಗಕ್ಕೆ ರೂಪಿಸಲಾದ ಪ್ರಣಾಳಿಕೆಯ ಹತ್ತು ಅಂಶಗಳನ್ನು 5 ಗ್ಯಾರಂಟಿಗಳೊಂದಿಗೆ ಈಡೇರಿಸಲು ಕಾಂಗ್ರೆಸ್ ಬದ್ಧವಾಗಿದೆ ಎಂದು ಮಂಜುನಾಥ್ ಭಂಡಾರಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಎಐಸಿಸಿ ವಕ್ತಾರ ಚರಣ್ ಸಿಂಗ್ ಸಪ್ರಾ,ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಎಐಸಿಸಿ ಮುಖಂಡ ಡಾ.ಅಜಯ ಕುಮಾರ್, ಪದ್ಮರಾಜ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here