ಮೇ 7: ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ 14ನೇ ಉಚಿತ ವೈದ್ಯಕೀಯ ಶಿಬಿರ

0

ಪುತ್ತೂರು: ಪ್ರತಿ ತಿಂಗಳು ವಿಶೇಷ ಚಿಕಿತ್ಸೆಗಳನ್ನು ಅಳವಡಿಸಿಕೊಂಡು ಒಂದು ವರುಷ ಪೂರೈಸಿದ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಉಚಿತ ವೈದ್ಯಕೀಯ ಶಿಬಿರದ 14 ನೇ ತಿಂಗಳ ವೈದ್ಯಕೀಯ ಶಿಬಿರವು ಮೇ.7ರಂದು ನಡೆಯಲಿದೆ.

ದೇವಸ್ಥಾನ ಹಾಗೂ ಆರೋಗ್ಯ ರಕ್ಷಾ ಸಮಿತಿ ವತಿಯಿಂದ ನಡೆಯುವ ಶಿಬಿರದಲ್ಲಿ ಕೀಲು ಮತ್ತು ಎಲುಬು ತಪಾಸಣೆ, ಇ.ಎನ್.ಟಿ ವೈದ್ಯಕೀಯ ತಪಾಸಣೆ, ಆಯುರ್ವೇದ ವೈದ್ಯಕೀಯ ತಪಾಸಣೆ, ಇಸಿಜಿ, ಮಧುಮೇಹ ರಕ್ತಪರೀಕ್ಷೆ ಹಾಗೂ ಔಷಽಗಳ ವಿತರಿಸಲಾಗುವುದು ಎಂದು ದೇವಸ್ಥಾನ ಹಾಗೂ ಆರೋಗ್ಯ ರಕ್ಷಾ ಸಮಿತಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here