ಬೆದ್ರೋಡಿ ದರ್ಗಾದಲ್ಲಿ ಅಶೋಕ್‌ ಕುಮಾರ್‌ ರೈ ಪ್ರಾರ್ಥನೆ-ಮತಯಾಚನೆ

0

ಪುತ್ತೂರು: ಮೇ 10ರಂದು ನಡೆಯಲಿರುವ ರಾಜ್ಯ ವಿಧಾನ ಸಭಾ ಚುನಾವಣೆಗೆ ಕೇವಲ 3 ದಿನಗಳು ಬಾಕಿ ಉಳಿದಿದ್ದು, ಅಭ್ಯರ್ಥಿಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಆಭ್ಯರ್ಥಿ ಅಶೋಕ್‌ ಕುಮಾರ್‌ ರೈ ಉಪ್ಪಿನಂಗಡಿಯ ಬೆದ್ರೋಡಿ ಪರಿಸರದಲ್ಲಿ ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ಇದೇ ವೇಳೆ ಅವರು ಬೆದ್ರೋಡಿ ದರ್ಗಾಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಬೆದ್ರೋಡಿ ಜಮಾತರು ಅಶೋಕ್‌ ರೈ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ವಿಟ್ಲ ಉಪ್ಪಿನಂಗಡಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಡಾ.ರಾಜಾ ರಾಂ, ಸೇರಿದಂತೆ ಪಕ್ಷದ ಸ್ಥಳೀಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here