ಗ್ರಾಮೀಣ ಮತದಾರರ ಭೇಟಿ ಮಾಡಿ ಮತಯಾಚಿಸಿದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ

0

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೆತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿ ಮೆ.6ರಂದು ಮತಯಾಚನೆ ನಡೆಸಿದರು. ಮುಖ್ಯವಾಗಿ ದಲಿತ ಕಾಲನಿಗಳು ಹಾಗೂ ಮನೆ ಮನೆಗೆ ಭೇಟಿ ನೀಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.


ಉಪ್ಪಿನಂಗಡಿ, ನೆಕ್ಕಿಲಾಡಿ, ಹಿರೆಬಂಡಾಡಿ, ಬನ್ನೂರು, ಒಳಮೊಗ್ರು, ಅರಿಯಡ್ಕ, ಬಜತ್ತೂರು, ಸೇರಿದಂತೆ ಹಲವು ಗ್ರಾಮಗಳಿಗೆ ಭೇಟಿ ನೀಡಿದ್ದರು. ಈ ವೇಳೆ ಹಲವಾರು ಕಾರ್ಯಕರ್ತರು ಇವರ ಜೊತೆಗಿದ್ದು ಅಭ್ಯರ್ಥಿ ಪರ ಮತಯಾಚನೆ ನಡೆಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಅಶೋಕ್ ರೈ ಬಹುತೇಕ ದಲಿತ ಕಾಲನಿಗಳು ಇನ್ನೂ ಅಭಿವೃದ್ದಿ ಕಂಡಿಲ್ಲ. ರಸ್ತೆಯಿಲ್ಲ, ಕುಡಿಯುವ ನೀರಿನ ವ್ಯವಸ್ಥೆಯನ್ನೂ ಸಮರ್ಪಕವಾಗಿ ಮಾಡಿಲ್ಲ. ದಲಿತರ ಅಭಿವೃದ್ದಿಗೆ ಸರಕಾರ ವರ್ಷದಿಂದ ವರ್ಷಕ್ಕೆ ಕೋಟಿಗಟ್ಟಲೆ ಅನುದಾನವನ್ನು ಮೀಸಲಿಡುತ್ತದೆ ಆದರೆ ಆ ಅನುದಾನ ಎಲ್ಲಿ ಬಳಕೆಯಾಗಿದೆ ಎಂಬುದು ಗೊತ್ತಾಗುತ್ತಿಲ್ಲ. ಕಳೆದ ಐದು ವರ್ಷಗಳಿಂದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ ಕಾಲನಿಗಳಲ್ಲಿ ಯಾವುದೇ ಅಭಿವೃದ್ದಿ ಕೆಲಸಗಳನ್ನು ಮಾಡಿಲ್ಲ. ಮುಗ್ದ ಜನರನ್ನು ಧರ್ಮದ ಹೆಸರಿನಲ್ಲಿ ಬಲಿಪಶುಗಳನ್ನಾಗಿ ಮಡಿ ಅವರನ್ನು ಬಳಕೆ ಮಾಡಿಕೊಂಡ ಬಿಜೆಪಿ ಅವರ ಅಭಿವೃದ್ದಿಗೆಂದೇ ಬಂದ ಹಣವನ್ನು ಇಲ್ಲಿ ವಿನಿಯೋಗಿಸಿಲ್ಲ ಎಂದು ಅರೋಪಿಸಿದರು.


ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲಿದ್ದು ಪುತ್ತೂರಿನಲ್ಲಿ ಕಾಂಗ್ರೆಸ್ ಗೆಲ್ಲಿಸಿದರೆ ಎಲ್ಲಾ ಕಾಲನೊಗಳ ಸಂಪೂರ್ಣ ಅಭಿವೃದ್ದಿ ಮಾಡುವುದಾಗಿ ಭರವಸೆ ನೀಡಿದರು.ಈ ಸಂದರ್ಭದಲ್ಲಿ ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ. ರಾಜಾರಾಂ ಕೆ ಬಿ, ಮುರಳೀಧರ್ ರೈ ಮಠಂತಬೆಟ್ಟು , ಉಪ್ಪಿನಂಗಡಿ ಗ್ರಾಪಂ ಸದಸ್ಯ ಯು ಟಿ ತೌಸೀಫ್ ಸೇರಿದಂತೆ ಹಲವು ಮಂದಿ ಕಾಂಗ್ರೆಸ್ ಮುಖಂಡರು, ಗ್ರಾಪಂ ಸದಸ್ಯರುಗಳು, ಮಾಜಿ ಗ್ರಾಪಂ ಸದಸ್ಯರುಗಳು, ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ತಿತರಿದ್ದರು. ಮನೆ ಮನೆ ಭೇಟಿ ವೇಳೆ ಅಶೋಕ್ ರೈ ಯವರಿಗೆ ಅಭೂತ ಪೂರ್ವ ಬೆಂಬಲ ವ್ಯಕ್ತವಾಯಿತು.

LEAVE A REPLY

Please enter your comment!
Please enter your name here