ಇರ್ದೆ- ಬೈಲಾಡಿ ಕಾಲೋನಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಮತಯಾಚನೆ

0

ಪುತ್ತೂರು: ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಇಂದು ಇರ್ದೆ ಗ್ರಾಮದ ಬೈಲಾಡಿ ದಲಿತ ಕಾಲೋನಿಯಲ್ಲಿ ಮತಯಾಚನೆ ನಡೆಸಿದರು. ಕಾಲೋನಿ ನಿವಾಸಿಗಳೊಂದಿಗೆ ಮಾತುಕತೆ ನಡೆಸಿದ ಅಶೋಕ್ ರೈ ಎಲ್ಲರೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು, ಆ ನಿಟ್ಟಿನಲ್ಲಿ ಪುತೂರಿನಲ್ಲಿ ಕಾಂಗ್ರೆಸ್ ಬೆಂಬಲಿಸಿ ಮತ ಚಲಾಯಿಸುವಂತೆ ಮನವಿ ಮಾಡಿದರು. ಗೆದ್ದು ಬಂದಲ್ಲಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here