2022-23ನೇ ಸಾಲಿನ ಕರ್ನಾಟಕ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಶಾಲಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ರಾಮಚಂದ್ರ, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದ್ದು, ಈ ಬಾರಿ ಶೇ. 83.89 ಫಲಿತಾಂಶ ಬಂದಿದೆ.
ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಒಟ್ಟು 7,00,619 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಪೈಕಿ 3,41,108 ಬಾಲಕರು ತೇರ್ಗಡೆಯಾಗಿದ್ದರೆ, 3,59,511 ಬಾಲಕಿಯರು ಉತ್ತೀರ್ಣರಾಗುವ ಮೂಲಕ ಮೇಲು ಗೈ ಸಾಧಿಸಿದ್ದಾರೆ. ರಾಜ್ಯದ ನಾಲ್ಕು ವಿದ್ಯಾರ್ಥಿಗಳು 625 ಅಂಕಕ್ಕೆ 625 ಅಂಕ ಪಡೆಯುವ ಮೂಲಕ ಪ್ರಥಮ ಸ್ಥಾನ ಪಡೆದಿದ್ದಾರೆ. ಫಲಿತಾಂಶದಲ್ಲಿ ಚಿತ್ರದುರ್ಗ ಪ್ರಥಮ ಸ್ಥಾನದಲ್ಲಿದ್ದು, ಮಂಡ್ಯ ಎರನೇ ಸ್ಥಾನದಲ್ಲಿದೆ. ಹಾಸನ ಮೂರನೇ ಸ್ಥಾದಲ್ಲಿದ್ದು, ಯಾದಗಿರಿ ಕೊನೆಯ ಸ್ಥಾನದಲ್ಲಿದೆ. 23 ಜಿಲ್ಲೆಗಳು ಎ ಗ್ರೆಡ್ ಪಡೆದಿದ್ದು , 12 ಜಿಲ್ಲೆಗಳು ಬಿ ಗ್ರೆಡ್ ಪಡೆದಿದೆ. ರಾಜ್ಯದಲ್ಲಿ ಒಟ್ಟು 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ದ.ಕ ಜಿಲ್ಲೆ ಫಲಿತಾಂಶದಲ್ಲಿ 19ನೇ ಸ್ಥಾನದಲ್ಲಿದ್ದು, ಉಡುಪಿ ಜಿಲ್ಲೆ 18ನೇ ಸ್ಥಾದಲ್ಲಿದೆ.
ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‍ಸೈಟ್ karresults.nic.in ನಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಲಿದೆ.