ಚುನಾವಣೆಗೆ ನಿಂತ ಅಭ್ಯರ್ಥಿಗಳು ಲಂಚ, ಭ್ರಷ್ಟಾಚಾರದ ವಿರುದ್ಧ ಪ್ರತಿಜ್ಜೆ ಮಾಡಲಿ; ಅಧಿಕಾರಿಗಳು ಲಂಚ, ಭ್ರಷ್ಟಾಚಾರದಿಂದ ಪಡೆದ ಹಣವನ್ನು ಜನರಿಗೆ ಹಿಂತಿರುಗಿಸುವ ಘೋಷಣೆ ಮಾಡಲಿ; ಸುದ್ದಿ ಜನಾಂದೋಲನ ತಾಲೂಕಿನ ಜನತೆಯಿಂದ ಬೆಂಬಲ

0

ಲಂಚ, ಭ್ರಷ್ಟಾಚಾರದ ವಿರುದ್ಧ ಸುದ್ದಿ ಜನಾಂದೋಲನ ವೇದಿಕೆ ವತಿಯಿಂದ ನಡೆಯುತ್ತಿರುವ ಹೋರಾಟದ ಮುಂದುವರಿದ ಭಾಗವಾಗಿ, ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಎಲ್ಲ ಅಭ್ಯರ್ಥಿಗಳೂ ಲಂಚ, ಭ್ರಷ್ಟಾಚಾರದ ವಿರುದ್ಧ ಪ್ರತಿಜ್ಞೆ ಮಾಡಬೇಕು ಮತ್ತು ಅಧಿಕಾರಿಗಳು ಲಂಚ, ಭ್ರಷ್ಟಾಚಾರದಿಂದ ಪಡೆದ ಹಣವನ್ನು ಜನರಿಗೆ ವಾಪಸ್ ತೆಗೆಸಿಕೊಡುವ ಘೋಷಣೆ ಮಾಡಬೇಕು ಮತ್ತು ಜನರೂ ಈ ಕುರಿತು ಅಭ್ಯರ್ಥಿಗಳನ್ನು ಕೇಳುವಂತಾಗಬೇಕು ಎಂಬ ನಿಟ್ಟಿನಲ್ಲಿ ಈ ಕುರಿತು ಫಲಕ ಅಳವಡಿಕೆಗೆ ತಾಲೂಕಿನ ಜನತೆಯಿಂದ ಉತ್ತಮ ಬೆಂಬಲ ವ್ಯಕ್ತವಾಗಿದೆ. ಹಲವು ಅಂಗಡಿ, ಮಳಿಗೆ, ಕಚೇರಿಗಳಲ್ಲಿ ಈ ಕುರಿತು ಫಲಕಗಳನ್ನು ಅಳವಡಿಸಿದ್ದಾರೆ. ಪುತ್ತೂರು, ಸುಳ್ಯ, ಬೆಳ್ತಂಗಡಿ ಸೇರಿದಂತೆ ದ.ಕ.ಜಿಲ್ಲೆಯ ವಿವಿಧ ಕ್ಷೇತ್ರಗಳ ಅಭ್ಯರ್ಥಿಗಳು ಈಗಾಗಲೇ, ಲಂಚ ಭ್ರಷ್ಟಾಚಾರದ ವಿರುದ್ಧ ಪ್ರತಿಜ್ಞೆ ಮಾಡಿದ್ದಾರೆ. ಜೊತೆಗೆ, ಅಧಿಕಾರಿಗಳು ಲಂಚ, ಭ್ರಷ್ಟಾಚಾರದಿಂದ ಪಡೆದ ಹಣವನ್ನು ಕಾನೂನಾತ್ಮಕ ರೀತಿಯಲ್ಲಿ ಜನರಿಗೆ ವಾಪಸ್ ತೆಗೆಸಿಕೊಡುವ ಕುರಿತೂ ಘೋಷಣೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here