ಪುತ್ತೂರು: ಪುತ್ತೂರಿನ ಪ್ರತಿಷ್ಟಿತ ವಿದ್ಯಾಸಂಸ್ಥೆ ಶ್ರೀ ರಾಮಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿಗಳು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಯವರು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನಡೆಸಿದ 2022-23ನೇ ಸಾಲಿನ ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆಯಲ್ಲಿ 8ನೇ ತರಗತಿಯ ವಿದ್ಯಾರ್ಥಿಗಳಾದ ಕುಶಿತ್ ಆರ್ ಗೌಡ (ಚಿಕ್ಕಮುಡ್ನೂರು ರಾಜೇಶ್ ಗೌಡ ಮತ್ತು ನಳಿನಿ ಕೆ ಯವರ ಪುತ್ರ), ನಿಶ್ಮಿತಾ ಎನ್ ( ಕೊಡಿಪ್ಪಾಡಿ ನಾಮದೇವ ಆಚಾರ್ಯ ಮತ್ತು ಜಯಲಕ್ಷ್ಮಿ ಎ ಯವರ ಪುತ್ರಿ), ರವರು ಉತ್ತೀರ್ಣರಾಗಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿರುತ್ತಾರೆ.
ಸಂಸ್ಥೆಯಿಂದ ತರಬೇತಿ ಪಡೆದು ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಲ್ಲಿ 02 ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆದಿರುತ್ತಾರೆ. ಈ ವಿದ್ಯಾರ್ಥಿಗಳಿಗೆ ಮುಖ್ಯೋಪಾಧ್ಯಾಯಿನಿ ಜಯಲಕ್ಷ್ಮಿ ಎ ಶಿಕ್ಷಕಿಯರಾದ ಹರಿಣಿ ಯು ಮತ್ತು ಮಾನಸ ವಿ ರವರು ತರಬೇತಿಯನ್ನು ನೀಡಿರುತ್ತಾರೆ ಎಂದು ಶಾಲಾ ಸಂಚಾಲಕರಾದ ಹೇಮನಾಥ ಶೆಟ್ಟಿ ಕಾವು ಹಾಗೂ ಮುಖ್ಯೋಪಾಧ್ಯಾಯಿನಿಯಾದ ಜಯಲಕ್ಷ್ಮಿ ಎ ಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿ ಅಭಿನಂದನೆ ಸಲ್ಲಿಸಿರುತ್ತಾರೆ.