ಎಸ್‌ಎಸ್‌ಎಲ್‌ಸಿ: ಹಿರೇಬಂಡಾಡಿ ಸರಕಾರಿ ಪ್ರೌಢಶಾಲೆಗೆ ಸತತ 3ನೇ ಬಾರಿಗೆ ಶೇ.100 ಫಲಿತಾಂಶ

0

ಹಿರೆಬಂಡಾಡಿ: ಕಳೆದ ಮಾರ್ಚ್ ಹಾಗೂ ಏಪ್ರಿಲ್ ತಿಂಗಳಿನಲ್ಲಿ ನಡೆದ 2022-23ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಹಿರೇಬಂಡಾಡಿ ಸರಕಾರಿ ಪ್ರೌಢಶಾಲೆಗೆ ಶೇ.100 ತೇರ್ಗಡೆ ಫಲಿತಾಂಶ ಲಭಿಸಿದೆ. ಈ ಮೂಲಕ ವಿದ್ಯಾಸಂಸ್ಥೆ ಸತತ 3ನೇ ಬಾರಿಗೆ ಶೇ.100 ಫಲಿತಾಂಶ ಪಡೆದ ಸಾಧನೆ ಮಾಡಿದೆ.


ಶಾಲೆಯಿಂದ ಪರೀಕ್ಷೆಗೆ ಹಾಜರಾದ 32 ವಿದ್ಯಾರ್ಥಿಗಳೂ ಉತ್ತೀರ್ಣರಾಗಿ ಶೇ. 100 ಫಲಿತಾಂಶ ಬಂದಿದೆ. 5 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 21 ವಿದ್ಯಾರ್ಥಿಗಳು ಪ್ರಥಮ ದರ್ಜೆ, 5 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಹಾಗೂ ಒಬ್ಬ ವಿದ್ಯಾರ್ಥಿ ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ. ಶಾಲೆಗೆ ಎ ಗ್ರೇಡ್ ಲಭಿಸಿದೆ. ಗೌತಮಿ 558, ಚೇತನಾ 554, ಮಸೂದ 545, ಆಯಿಷತ್ ಝಿಯಾನ 540, ಆಯಿಷತ್ ಮುನಝಾಹ 538 ಅಂಕ ಪಡೆದುಕೊಂಡು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಗೊಂಡಿದ್ದಾರೆ.

LEAVE A REPLY

Please enter your comment!
Please enter your name here