ನೆಲ್ಯಾಡಿ: ಕಳೆದ ಮಾರ್ಚ್ ಹಾಗೂ ಏಪ್ರಿಲ್ ತಿಂಗಳಿನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಕೊಣಾಲು ಸರಕಾರಿ ಪ್ರೌಢಶಾಲೆಗೆ ಶೇ.100 ತೇರ್ಗಡೆ ಫಲಿತಾಂಶ ಬಂದಿದೆ.
ಪ್ರೌಢಶಾಲೆಯಿಂದ ಪರೀಕ್ಷೆಗೆ ಹಾಜರಾದ 26 ವಿದ್ಯಾರ್ಥಿಗಳೂ ತೇರ್ಗಡೆಯಾಗಿ ಶೇ.100 ಫಲಿತಾಂಶ ಬಂದಿದೆ. 3 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ,16 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ,6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ ಓರ್ವ ವಿದ್ಯಾರ್ಥಿ ತೃತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಪ್ರಜ್ಞಾ ಎಂ.ಆರ್. 566( ರುಕ್ಮಯ್ಯ ಪೂಜಾರಿ ಮತ್ತು ಹೇಮಾವತಿ ದಂಪತಿ ಪುತ್ರಿ), ರಕ್ಷಾ ಶೆಟ್ಟಿ 547( ರವೀಂದ್ರ ಶೆಟ್ಟಿ ಮತ್ತು ಜಯಂತಿ ದಂಪತಿ ಪುತ್ರಿ) ಹಾಗೂ ಅಕ್ಷತ್ 532( ಕುಟ್ಟಿ ಮತ್ತು ಗಿರಿಜ ದಂಪತಿ ಪುತ್ರ) ಅಂಕ ಪಡೆದುಕೊಂಡು ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ ಎಂದು ಶಾಲಾ ಮುಖ್ಯಶಿಕ್ಷಕರು ತಿಳಿಸಿದ್ದಾರೆ.