ಪಾಣಾಜೆ ಸುಬೋಧ ಪ್ರೌಢಶಾಲೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

0

ಪಾಣಾಜೆ: 2022-23 ನೇ ಶೈಕ್ಷಣಿಕ ಸಾಲಿನ ಕರ್ನಾಟಕ  ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಪಾಣಾಜೆ ಸುಬೋಧ ಪ್ರೌಢಶಾಲೆಗೆ ಶೇ.100 ಫಲಿತಾಂಶ ಬಂದಿರುತ್ತದೆ.

ಪರೀಕ್ಷೆಗೆ  ಒಟ್ಟು 27 ವಿದ್ಯಾರ್ಥಿಗಳು ಹಾಜರಾಗಿದ್ದರು. ನಾಲ್ಕು ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿಯೂ, 18 ವಿದ್ಯಾರ್ಥಿಗಳು ಪ್ರಥಮ ಸ್ಥಾನದಲ್ಲಿ ಹಾಗೂ ಐದು ವಿದ್ಯಾರ್ಥಿಗಳು ದ್ವಿತೀಯ ಸ್ಥಾನದಲ್ಲಿ ತೇರ್ಗಡೆಯಾಗಿರುತ್ತಾರೆ. ಅರ್ಪಿತಾ ಪಿ, ಪಡ್ಯoಬೆಟ್ಟು ರಾಮನಾಯ್ಕ ಹಾಗೂ ಪುಷ್ಪ ಅವರ ಪುತ್ರಿ 93.60% ಅಂಕಗಳನ್ನು ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಪಡೆದು ಕೊಂಡಿರುತ್ತಾಳೆ. ತನುಶ್ರೀ, ಕಾಕೆಕೊಚ್ಚಿ ರಾಮಚಂದ್ರಹಾಗೂ ಸೀತಾ ಅವರ ಪುತ್ರಿ 93.28% ಅಂಕಗಳನ್ನು ಗಳಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ ಎಂದು ಶಾಲಾ ಸಂಚಾಲಕ ಮಹಾಬಲೇಶ್ವರ ಭಟ್ ಗಿಳಿಯಾಲು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here