ಬೆಟ್ಟಂಪಾಡಿ ಸರಕಾರಿ ಪ್ರೌಡಶಾಲೆಗೆ ಶೇ. 94.73 ದಾಖಲೆಯ ಫಲಿತಾಂಶ

0

ನಿಡ್ಪಳ್ಳಿ: ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಬೆಟ್ಟಂಪಾಡಿ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಪರೀಕ್ಷೆಗೆ ಹಾಜರಾದ 19 ವಿದ್ಯಾರ್ಥಿಗಳಲ್ಲಿ 18 ವಿದ್ಯಾರ್ಥಿಗಳು ಉತ್ತೀರ್ಣರಾಗಿ 94.73% ಪಡೆದು ಕೆಲವು ವರ್ಷಗಳ ಫಲಿತಾಂಶದಲ್ಲಿ ಇದು ದಾಖಲೆಯ ಫಲಿತಾಂಶವಾಗಿದೆ.

ಒಟ್ಟು 4 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 11 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 3 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಶ್ರೇಯ ಸಿ.ಎಚ್, ಅನುಶ್ರೀ, ಖದೀಜತ್ ಮಿಸ್ವಾನ, ತ್ರೀಕ್ಷಾ ಇವರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶಾಲೆಗೆ ಕೀರ್ತಿ ತಂದಿರುತ್ತಾರೆ. ಶ್ರೇಯ.ಸಿ.ಎಚ್ 562 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ ಎಂದು ಮುಖ್ಯ ಗುರು ವಿಜಯ ಕುಮಾರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here