ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ತೃತೀಯ ಉತ್ತಮ್ ಗೆ ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದಿಂದ ಸನ್ಮಾನ

0

ಕಾಣಿಯೂರು: ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿ ರಾಜ್ಯದಲ್ಲಿ ತೃತೀಯ ಸ್ಥಾನಗಳಿಸಿದ ಕಾಣಿಯೂರು ಗುಂಡಿಗದ್ದೆ ಪದ್ಮನಾಭ ಗೌಡ ಮತ್ತು ಹೇಮಾವತಿ ದಂಪತಿಗಳ ಪುತ್ರ ಉತ್ತಮ್.ಜಿ. ಇವರನ್ನು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಯುವಕ ಮಂಡಲದ ಗೌರವಾಧ್ಯಕ್ಷ ಸುರೇಶ್ ಓಡಬಾಯಿ, ಅಧ್ಯಕ್ಷ ರಾಜೇಶ್ ಮೀಜೆ, ಕಾರ್ಯದರ್ಶಿ ದೀಕ್ಷಿತ್ ಕಂಪ, ಉಪಾಧ್ಯಕ್ಷ ಧರ್ಮಪಾಲ ಕಲ್ಪಡ, ಮಾಜಿ ಅಧ್ಯಕ್ಷರಾದ ಪರಮೇಶ್ವರ ಅನಿಲ, ರಚನ್ ಬರಮೇಲು, ಲಕ್ಷ್ಮಣ ಗೌಡ ಮುಗರಂಜ, ವಸಂತ ಪೆರ್ಲೋಡಿ, ಹರ್ಷಿತ್ ಅನಿಲ, ವಿದ್ಯಾರ್ಥಿಯ ತಂದೆ ಪದ್ಮನಾಭ ಗೌಡ ಗುಂಡಿಗದ್ದೆ, ತಾಯಿ ಹೇಮಾವತಿ, ಸಹೋದರಿ ಅಖಿಲಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here