ವಿಟ್ಲ: ಇಲ್ಲಿನ ಬಸವನ ಗುಡಿಯ ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಆಧ್ಯಕ್ಷ ಯಲ್.ಯನ್. ಕೂಡೂರುರವರು ಜೇಸಿ ಶಾಲಾ ಶೈಕ್ಷಣಿಕ ಬೆಳವಣಿಗೆ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ಪೂರಕವಾಗಿ ಎಲ್ಲಾ ನೆರೆಯ ಸಂಸ್ಥೆಗಳಿಂದ ಪ್ರಶಂಸಿಸಲ್ಪಟ್ಟಿದೆ ಹಾಗೂ ಉಳಿಸಿಕೊಳ್ಳುವ ಪ್ರಯತ್ನ ನಮ್ಮದಾಗಬೇಕೆಂದು ಕಿರಿಯ ವಿದ್ಯಾರ್ಥಿಗಳಿಗೆ ಕಿವಿಮಾತನ್ನು ಹೇಳಿದರು. ಅಲ್ಲದೆ ಈ ವರ್ಷದ ಸಾಧನೆಗೆ ಶ್ರಮಿಸಿದ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಪ್ರಶಂಸಿದರು. ಉಪಾಧ್ಯಕ್ಷ ಶ್ರೀಧರ ಶೆಟ್ಟಿ, ಜತೆ ಕಾರ್ಯದರ್ಶಿ ಶ್ರೀಪ್ರಕಾಶ್ ಕುಕ್ಕಿಲ, ನಿರ್ದೇಶಕ ಮೋನಪ್ಪ ಶೆಟ್ಟಿ, ಆಡಳಿತಾಧಿಕಾರಿ ರಾಧಾಕೃಷ್ಣ.ಎ, ಉಪಾಪ್ರಾಂಶುಪಾಲೆ ಯರಾದ ಜ್ಯೋತಿ ಶೆಣೈ ಹಾಗೂ ಹೇಮಲತಾ ಉಪಸ್ಥಿತರಿದ್ದರು.
ಈ ಬಾರಿ ಗರಿಷ್ಟ 616 ಅಂಕ ಪಡೆದ ತಸ್ಮಯಿ.ಯಸ್.ಶೆಟ್ಟಿ ತಮ್ಮ ಅನಿಸಿಕೆ ವ್ಯಕ್ತ ಪಡಿಸಿದರು. ಪ್ರಾಂಶುಪಾಲರಾದ ಜಯರಾಮ ರೈ ಶಾಲೆಗೆ 100 ಶೇಕಡಾ ಫಲಿತಾಂಶ ತಂದುಕೊಟ್ಟದ್ದಕ್ಕಾಗಿ ಅಭಿನಂದನೆ ಸಲ್ಲಿಸುತ್ತಾ, ವಿವಿಧ ಶ್ರೇಣಿಗಳ ಫಲಿತಾಂಶದ ವಿವರ ನೀಡಿ ಸ್ವಾಗತಿಸಿದರು. 600ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸ್ಮರಣಿಕೆ, ಪ್ರಮಾಣಪತ್ರ ನೀಡಿ ಗೌರವಿಸಲಾಯಿತು. ಶಿಕ್ಷಕಿ ತೇಜಸ್ವಿನಿ ಪ್ರಾರ್ಥಿಸಿ, ಶಿಕ್ಷಕಿ ಗೀತಾ.ಕೆ ಕಾರ್ಯಕ್ರಮ ನಿರೂಪಿಸಿದರು.