ಮೇ 12: ಫಿಲೋಮಿನಾ ಕಾಲೇಜಿನಲ್ಲಿ ಮಂಗಳೂರು ವಿ.ವಿ ಅಂತರ್-ಕಾಲೇಜು ಮಹಿಳೆಯರ ಕ್ರಿಕೆಟ್

0

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ, ಮಂಗಳೂರು ಮತ್ತು ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಕಾಲೇಜು ಇವುಗಳ ಜಂಟಿ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್-ಕಾಲೇಜು ಮಹಿಳೆಯರ ಕ್ರಿಕೆಟ್ ಪಂದ್ಯಾಟವು ಮೇ 12 ರಂದು ಫಿಲೋಮಿನಾ ಕಾಲೇಜು ಕ್ರೀಡಾಂಗಣದಲ್ಲಿ ಜರಗಲಿದೆ.

ಸಂಜೆ ನಡೆಯುವ ಬಹುಮಾನ ವಿತರಣಾ ಸಮಾರಂಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಯಿದೆ ದೇವುಸ್ ವಿದ್ಯಾಸಂಸ್ಥೆಗಳ ಸಂಚಾಲಕ ವಂ|ಲಾರೆನ್ಸ್ ಮಸ್ಕರೇನ್ಹಸ್‌ರವರು ವಹಿಸಿಕೊಳ್ಳಲಿದ್ದಾರೆ. ಗೌರವ ಅತಿಥಿಗಳಾಗಿ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲ ವಂ|ಡಾ|ಆಂಟನಿ ಪ್ರಕಾಶ್ ಮೊಂತೇರೊ, ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ|ಜೆರಾಲ್ಡ್ ಸಂತೋಷ್ ಡಿಸೋಜ, ಫಿಲೋಮಿನಾ ಕಾಲೇಜು ಕ್ಯಾಂಪಸ್ ನಿರ್ದೇಶಕ ವಂ|ಸ್ಟ್ಯಾನಿ ಪಿಂಟೋರವರು ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here